ಬಳ್ಳಾರಿಯ ವಿಎಸ್‌ಕೆ ವಿವಿಯಲ್ಲಿ ಆಯೋಜಿಸಿದ್ದ ಗುಡ್ಡಗಾಡು ಓಟದ ಸ್ಪರ್ಧೆ ಕಾರ್ಯಕ್ರಮವನ್ನು ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಜೆ. ಉದ್ಘಾಟಿಸಿ ಚಾಲನೆ ನೀಡಿದರು. ವಿವಿಯ ಕ್ರೀಡಾ ವಿಭಾಗದ ನಿರ್ದೇಶಕರಾದ ಡಾ.ಶಶಿಧರ ಕೆಲ್ಲೂರ, ಡಾ.ಸಂಪತ ಕುಮಾರ, ಸಿಬ್ಬಂದಿ ಲಿಂಗನಾಯ್ಕ, ಬೀರಲಿಂಗಪ್ಪ, ರಾಜೇಶ ಇದ್ದರು.
ಬಳ್ಳಾರಿ : ಯುವ ಸಮುದಾಯ ಪ್ರತಿನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಎಸ್‌ಕೆ ವಿವಿ ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ ಜೆ. ಹೇಳಿದರು.
ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗ ವತಿಯಿಂದ ಪ್ರಸ್ತಕ ಸಾಲಿನ ಅಂತರ ಮಹಾವಿದ್ಯಾಲಯ ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಆಗ ಮಾತ್ರ ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣಬಹುದು. ವರ್ಷದಿಂದ ವರ್ಷಕ್ಕೆ ಕ್ರೀಡಾಪಟಟುಗಳು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ಭಾಗವಹಿಸುವಿಕೆಗೆ ಆದ್ಯತೆ ನೀಡಬೇಕು ಎಂದರು. ಪುರುಷರ ಗುಂಪು ವಿಭಾಗದಲ್ಲಿ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ತಂಡ ಹಾಗೂ ಮಹಿಳೆಯರ ವಿಭಾಗದಲ್ಲಿ ಸಂಡೂರಿನ ಸರ್ಕಾರಿ ಮಹಾವಿದ್ಯಾಲಯ ತಂಡ ಪ್ರಥಮ ಸ್ಥಾನ ಪಡೆದರು.