ತಾಲೂಕಿನ ಗೋನಾಳ್ ನಿವಾಸಿ ಐಶ್ವರ್ಯ ( 25 )ಮೃತ. ಬಳ್ಳಾರಿಯಿಂದ ಗೋನಾಳ್ ಗ್ರಾಮಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಬಲವಾದ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿದ್ದ ಇನ್ನೂರ್ವ ಅನು ರಾಘವೇಂದ್ರ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮೋಕಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.