ವೃದ್ಧೆಯ ಬಂಗಾರ ಸರ ಕಸಿದ ಯುವಕ

ಬಂಗಾರ ಸರ ಕಸಿದ ಯುವಕ
ಬಂಗಾರ ಸರ ಕಸಿದ ಯುವಕ
Published on

ಪ್ರಮುಖ ಮುಖ್ಯಾಂಶಗಳು

  • ಯುವಕ ಕಸಿದುಕೊಂಡು ಪರಾರಿ

ಬಳ್ಳಾರಿ :

ವೃದ್ಧೆಯ ಕೊರಳಿನಲ್ಲಿದ್ದ ಬಂಗಾರದ ಸರವನ್ನು ಅಪರಿಚಿತ ಯುವಕ ಕಸಿದುಕೊಂಡು ಪರಾರಿಯಾಗಿರುವ ಘಟನೆ ನಗರದ ಗೌಳೇರಹಟ್ಟಿಯಲ್ಲಿ ನಡೆದಿದೆ.

ನಗರದ ನಿವಾಸಿ ಲಿಂಗಮ್ಮ ಎಂಬುವರು ಗೌಳೇರಹಟ್ಟಿಯಲ್ಲಿ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಜೆರ್ಕಿನ್ ಹಾಗೂ ಕ್ಯಾಪ್ ಧರಿಸಿದ್ದ ಯುವಕನೊಬ್ಬ ಹಿಂಬದಿಯಿಂದ ಬಂದು ಲಿಂಗಮ್ಮ ಅವರ ಕೊರಳಿನಲ್ಲಿದ್ದ 4.50 ಲಕ್ಷ ರೂ. ಮೌಲ್ಯದ 41.82 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದುಕೊಂಡು ಓಡಿಹೋಗಿದ್ದಾನೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net