ಚಿಕ್ಕಣ್ಣ ಬೆಂಬಲ ಕೋರಿದ ಬಾಲರಾಜ್

22 SARAG 2
ಬೀಚನಹಳ್ಳಿಯಲ್ಲಿರುವ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಅವರ ಮನೆಗೆ ಬಾಲರಾಜು ಭೇಟಿ ನೀಡಿ ಬೆಂಬಲ ಕೋರಿದರು.
Published on

ಸರಗೂರು: ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಮಾಜಿ ಶಾಸಕ ಚಿಕ್ಕಣ್ಣ ಅವರ ನಿವಾಸಕ್ಕೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಗುರುವಾರ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಕಾರ್ಯಗಳಿಗೆ ಜನ ಬೆಂಬಲ ನೀಡಲಿದ್ದಾರೆ. ಈಗಾಗಲೇ ಬಹುತೇಕರು ನನಗೆ ಬೆಂಬಲ ಸೂಚಿಸಿದ್ದು, ಸಂಸದ ವಿ.ಶ್ರೀನಿವಾಸಪ್ರಸಾದ್ ನೇತೃತ್ವದಲ್ಲಿ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಲಾಗುವುದು. ಚುನಾವಣೆಯಲ್ಲಿ ಗೆದ್ದರೆ ಹೆಚ್ಚಿನ ಅನುದಾನ ತಂದು ತಾಲೂಕನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಬಾಲರಾಜ್ ಸುದ್ದಿಗಾರರಿಗೆ ತಿಳಿಸಿದರು.

ಕೇಂದ್ರ ಸರ್ಕಾರ ಮತ್ತು ಶ್ರೀನಿವಾಸಪ್ರಸಾದ್ ಅವರ ಅಧಿಕಾರಾವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸ ನನ್ನನ್ನು ಕೈಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರು, ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು. ಜಿಪಂ ಮಾಜಿ ಸದಸ್ಯ ವೆಂಕಟಸ್ವಾಮಿ, ಜೆಡಿಎಸ್ ತಾಲೂಕು ಘಟಕದ ಮಾಜಿ ಅಧ್ಯಕ್ಷ ಸುಂದರ್‌ಗೌಡ, ಗೋವಿಂದ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net