

* ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ವೇಳಾಪಟ್ಟಿ ಪ್ರಕಟ
* ಆಕಾಂಕ್ಷಿಗಳಲ್ಲಿ ಡವಡವ
ಗಂಗಾಧರ್ ಬೈರಾಪಟ್ಟಣ ರಾಮನಗರ ಅಂತೂ ಇಂತೂ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಸ್ಥಾನದ ಚುನಾವಣೆಗೆ ದಿನಾಂಕ ನಿಗದಿಪಡಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. 2024ರ ಮಾರ್ಚ್, ಏಪ್ರಿಲ್‌ನಲ್ಲಿಯೇ ಚುನಾವಣೆ ನಡೆಯಬೇಕಿತ್ತಾದರೂ, ಹಲವು ಬಾರಿ ಸಿದ್ಧತೆ ಮಾಡಿಕೊಂಡಿದ್ದರೂ ಲೋಕಸಭೆ ಚುನಾವಣೆ ಕಾರಣಕ್ಕೆ ಮುಂದೂಡಲಾಗಿತ್ತು. ಈಗ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಿ. ಜಗದೀಶ್ ಮೇ 25ಕ್ಕೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿ ಆದೇಶ ಹೊರಡಿಸಿದ್ದಾರೆ.
ಲೋಕಸಭೆ ಚುನಾವಣೆ ಕಾರಣ ಮುಂದೂಡಲ್ಪಟ್ಟಿದ್ದ ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯನ್ನು ಒಳಗೊಂಡ ಬಮುಲ್ ಚುನಾವಣೆಯನ್ನು ಲಿತಾಂಶ ಪ್ರಕಟಗೊಂಡ ನಂತರವೂ ನಡಸದೇ ಇದ್ದ ಕಾರಣ, ಚನ್ನಪಟ್ಟಣ ಬಮುಲ್ ನಿರ್ದೇಶಕ ಎಚ್.ಸಿ. ಜಯಮುತ್ತು ಕೋರ್ಟ್ ಮೆಟ್ಟಿಲೇರಿದ್ದರು. ನಂತರ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ, ಕೋರ್ಟ್ ಆದೇಶಕ್ಕೂ ಮನ್ನಣೆ ನೀಡಿರಲಿಲ್ಲ. ಈಗ ಹೈಕೋರ್ಟ್‌ನ ಆದೇಶದಂತೆ ಚುನಾವಣೆ ದಿನಾಂಕವನ್ನು ೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿಯೂ ಆದ ಬೆಂಗಳೂರು ನಗರ ಜಿಲ್ಲಾಧಿಕಾರಿ ನಿಗದಿಪಡಿಸಿದ್ದಾರೆ.
ಬಮುಲ್ ವ್ಯಾಪ್ತಿಯಲ್ಲಿ ಒಟ್ಟು 13 ನಿರ್ದೇಶಕರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತಿದೆ. ಇದರಲ್ಲಿ ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಕುದೂರು, ಬೆಂಗಳೂರು ದಕ್ಷಿಣ, ಉತ್ತರ, ಪೂರ್ವ, ಹೊಸಕೋಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಆನೇಕಲ್, ನೆಲಮಂಗಲ ಕ್ಷೇತ್ರಗಳನ್ನು ಹೊಂದಿವೆ. ಈ ಕ್ಷೇತ್ರ ವ್ಯಾಪ್ತಿಯ ಎಂಪಿಸಿಎಸ್‌ಗಳ ಮೂಲಕ ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಜಿಲ್ಲೆಯಲ್ಲಿ ಒಟ್ಟು 966 ಎಂಪಿಸಿಎಸ್‌ಗಳು ಇದ್ದು, ಇವುಗಳಲ್ಲಿ 888 ಸಂಘಗಳು ಮತಚಲಾವಣೆ ಮಾಡುವ ಅರ್ಹತೆ ಹೊಂದಿದ್ದವು. ಈ ಸಂಬಂ‘ ಬಮುಲ್ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ, ಈಗ ಮತ್ತೆ ಅರ್ಹ ಸಂಘಗಳ ಪಟ್ಟಿ ಬಿಡುಗಡೆ ಮಾಡುವ ಜತೆಗೆ, ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಇದಕ್ಕೆ ಸಾಕಷ್ಟು ಸಮಯ ತೆಗೆದುಕೊಳ್ಳಲಿದ್ದು, ಈಗ ಆಕಾಂಕ್ಷಿಗಳ ಕಸರತ್ತು ಆರಂ‘ಗೊಂಡಂತೆ ಆಗಿದೆ.
ರಾಮನಗರ ಜಿಲ್ಲೆಯ ಒಟ್ಟು 6 ಕ್ಷೇತ್ರಗಳಿದ್ದು, ಇದರಲ್ಲಿ ರಾಮನಗರದಿಂದ ಹಾಲಿ ನಿರ್ದೇಶಕ ಪಿ.ನಾಗರಾಜು, ಚನ್ನಪಟ್ಟಣದಿಂದ ಎಚ್.ಸಿ. ಜಯಮುತ್ತು, ಕನಕಪುರದಿಂದ ರಾಜ್ ಕುಮಾರ್, ಹಾರೋಹಳ್ಳಿ ಒಳಗೊಂಡ ಬೆಂಗಳೂರು ದಕ್ಷಿಣಕ್ಕೆ ಹರೀಶ್ ಕುಮಾರ್, ಕುದೂರಿಗೆ ಕೆಇಬಿ ರಾಜಣ್ಣ ಮತ್ತೊಮ್ಮೆ ಸ್ಪರ್ಧೆ ಮಾಡಲು ಸಿದ್ಧತೆ ನಡೆಸಿದ್ದು, ಇವರಲ್ಲಿ ಪಿ.ನಾಗರಾಜು, ಎಚ್.ಸಿ. ಜಯಮುತ್ತು ಪ್ರಬಲ ಪೈಪೋಟಿ ಎದುರಿಸಲಿದ್ದಾರೆ.
ಚನ್ನಪಟ್ಟಣದಿಂದ ಮಾಜಿ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್ ಸ್ಪರ್ಧೆ ಮಾಡುವುದು ಖಚಿತವಾಗಿದೆ.
ಇನ್ನು ಹಾಲಿ ನಿರ್ದೇಶಕ ನರಸಿಂಹಮೂರ್ತಿ ಸ್ಪರ್ಧೆಯಿಂದ ಹಿಂದೆ ಸರಿಯಲಿದ್ದಾರೆ ಎನ್ನಲಾಗಿದ್ದು, ಶಾಸಕ ಎಚ್.ಸಿ.ಬಾಲಕೃಷ್ಣ ಸಹೋದರ ಎಚ್.ಎನ್. ಅಶೋಕ್ ಸ್ಪರ್ಧೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಕೆಎಂಎಫ್ ಅಧ್ಯಕ್ಷ ರಾಗಲು ಬಮುಲ್ ಸೇರಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಗತ್ಯವಿಲ್ಲ, ಸರ್ಕಾರವೇ ನೇರವಾಗಿ ನಿರ್ದೇಶಕ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಿ, ನಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಅವರ ಸ್ಪರ್ಧೆ ಸಾಧ್ಯತೆ ಕಡಿಮೆ ಎನ್ನುವ ಲೆಕ್ಕಾಚಾರವೂ ಕೇಳಿ ಬಂದಿದೆ.
ಇದರ ನಡುವೆ ಮಾಜಿ ಸಂಸದ ಡಿ.ಕೆ.ಸುರೇಶ್ ಕೆಎಂಎ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಇದಕ್ಕಾಗಿ ಬಮುಲ್ ನಿರ್ದೇಶಕರಾಗಿ ಆಯ್ಕೆಗೊಳ್ಳುವ ಇಂಗಿತವನ್ನು ಹೊರಹಾಕಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಲೇ ಇದೆ.