ಮದ್ಯ ಮಾರಾಟದ ವಿರುದ್ಧ ಸಿಡಿದೆದ್ದ ಮಹಿಳೆಯರು: ಗುಮ್ಮನಹಳ್ಳಿ ಗ್ರಾಪಂ ಕಚೇರಿಗೆ ಮುತ್ತಿಗೆ

Protest
Published on

ಪಾಂಡವಪುರ: ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಪೆಟ್ಟಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಮಹಿಳೆಯರು ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಗುರುವಾರ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಕೇವಲ ಹೆಸರಿಗಷ್ಟೇ ಕಿರಾಣಿ ಅಂಗಡಿ ಹಾಗೂ ಕ್ಯಾಂಟಿನ್‌ಗಳನ್ನು ನಡೆಸಲಾಗುತ್ತಿದೆ. ಆದರೆ ಇಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಬಕಾರಿ, ಪೊಲೀಸ್ ಸೇರಿದಂತೆ ಸಂಬಂಧಪಟ್ಟ ಯಾವೊಬ್ಬ ಅಧಿಕಾರಿಯೂ ಈ ಬಗ್ಗೆ ಕ್ರಮ ವಹಿಸುತ್ತಿಲ್ಲ. ಹೀಗಾಗಿ ಗ್ರಾಪಂನಿಂದಲೇ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಶಾಸಕ ಸಿ.ಎಸ್.ಪುಟ್ಟರಾಜು ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಗ್ರಾಪಂ ಅಧ್ಯಕ್ಷೆ ಭವಾನಿ ಸುನೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸುಂದರಮ್ಮ, ಸಾಕಮ್ಮ, ಪದ್ಮಮ್ಮ, ಶಶಿಕಲಾ, ಸವಿತಾ, ಕುಮಾರಿ, ಮಜುಳಾ, ಲಕ್ಷ್ಮಮ್ಮ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net