

ಮಂಡ್ಯ: ಜಿಲ್ಲೆಯಲ್ಲಿ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಷ್ ಕಬಾಬ್ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆಹಾರ ಸುರಕ್ಷಿತ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ.
ಆದೇಶ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಅಂತಹವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗುವುದು. 10 ಸಾವಿರ ರೂನಿಂದ ಒಂದು ಲಕ್ಷ ರೂವರೆಗೆ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.