

ವಿಜಯಪುರ:ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಜಿಲ್ಲಾದ್ಯಂತ ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಬಳಸುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡ ಸಭೆಯಲ್ಲಿ ಮಾತನಾಡಿದ ಅವರು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ವಸ್ತುಗಳುಳ್ಳ ಗಣೇಶ ವಿಗ್ರಹಗಳನ್ನು ಬಳಸದೇ ಪರಿಸರ ಸ್ನೇಹಿ ಗಣೇಶ ವಿಗ್ರಹಗಳನ್ನು ಉತ್ಪಾದನೆ, ಸಂಗ್ರಹಣೆ ನಿಷೇಧವಿದ್ದು, ನಿಷೇಧವಿರುವ ಬಗ್ಗೆ ಸಂಬಂಧಿಸಿದ ತಾಲೂಕಾ ಮಟ್ಟದಲ್ಲಿ ಸಭೆ ನಡೆಸುವದರ ಕಟ್ಟುನಿಟ್ಟಾಗಿ ಕ್ರಮವಂತೆ ಅವರು ಎಚ್ಚರಿಕೆ ನೀಡಿದರು
ಎಲ್ಲಾ ಸ್ಥಳಿಯ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಗಣೇಶ ಮೂರ್ತಿ ತಯಾರಕರ ಜತೆಗೆ ಮತ್ತು ಗಣೇಶ ಮಹಾ ಮಂಡಳಿಗಳೊಂದಿಗೆ ಸಭೆ ನಡೆಸುವ ಮೂಲಕ ಪಿಒಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಿದ ವಿಗ್ರಹಗಳ ಉತ್ಪಾದನೆ, ಸಂಗ್ರಹಣೆ ನಿಷೇಧ ಇರುವುದರ ಬಗ್ಗೆ ತಿಳಿಸಬೇಕು ಎಂದು ಅವರು ಸೂಚಿಸಿದರು.
ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕೆ ಮತ್ತು ಮಾರಾಟ ಉತ್ತೇಜಿಸಬೇಕು. ಅದರಂತೆ ಜಲಮೂಲಗಳಲ್ಲಿ ವಿಸರ್ಜಿಸದಂತೆ ಎಚ್ಚರವಹಿಸುವುದರ ಜತೆಗೆ ಸೂಕ್ತ ಪ್ರದೇಶದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಕೃತಕ ಕೆರೆ/ಹೊಂಡಗಳನ್ನು ನಿರ್ಮಿಸಿ ಮೂರ್ತಿ ವಿಸರ್ಜನೆಗೆ ಅವಕಾಶ ಒದಗಿಸಿ ಕೊಡಬೇಕೆಂದು ಸೂಚಿಸಿದರು.ಪರಿಸರ ಸ್ನೇಹಿ ಹಬ್ಬದ ಆಚರಣೆ ಮತ್ತು ಮಣ್ಣಿನ ಗಣೇಶ ಮೂರ್ತಿ ಬಳಕೆಯ ಕುರಿತು ಮಾಧ್ಯಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು. ಹೂವು, ವಸ ಪ್ಲಾಸ್ಟಿಕ್ ಹಾರ ಮತ್ತಿತರ ಅಲಂಕಾರಿಕ ವಸ್ತು ನ ತ್ಯಾಜ್ಯ ವಸ್ತುಗಳನ್ನು ಗಣೇಶ ಮೂರ್ತಿಗಳೊಂದಿಗೆ ವಿಸರ್ಜಿಸದಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪಿಒಪಿ ಹಾಗೂ ರಾಸಾಯನಿಕ ವಸ್ತುಗಳನ್ನು ಬಳಸಿದ ಗಣೇಶ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ವ್ಯಾಪಾರ ಲೈಸನ್ಸ್ ನೀಡದಂತೆ ಹಾಗೂ ಈಗಾಗಲೇ ಲೈಸನ್ಸ್ ನೀಡಿದ್ದಲ್ಲಿ ಮರಳಿ, ವಾಪಸ್ ಪಡೆಯುವಂತೆ ಸೂಚಿಸಿದ ಅವರು, ಅನಧಿಕೃತ ಮಾರಾಟ ಮಾಡುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಸೂಚಿಸಿದ ಜಿಲ್ಲಾಧಿಕಾರಿಗಳು, ಹೊರ ರಾಜ್ಯದಿಂದ ನಗರ ಮತ್ತು ಪಟ್ಟಣಕ್ಕೆ ಪಿಒಪಿ ವಿಗ್ರಹಗಳನ್ನು ಬರದಂತೆ ತಡೆಯಲು ಜಿಲ್ಲೆಯ ಗಡಿ ಭಾಗಗದ ಠಾಣೆ ಹಾಗೂ ಚೆಕ್ ಫೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ತಾಕೀತು ಮಾಡಿದರು.
ಪಟಾಕಿ ಮಾರಾಟಗಾರರು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾರಾಟ ಮಾಡಬೇಕು. ಮತ್ತು ಧ್ವನಿವರ್ಧಕ ಬಳಸಲು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು. ನಿಗದಿತ ಸಮಯದಲ್ಲಿ ಧ್ವನಿವರ್ಧಕ ಬಳಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ತಾಲೂಕಾ ಮಟ್ಟದಲ್ಲಿ ಸಭೆ ನಡೆಸುವುದರ ಮೂಲಕ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮವಹಿಸಬೇಕು.
ಜನರ ಸುರಕ್ಷತೆಯ ದೃಷ್ಠಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ ಸೌದಾಗರ, ಪರಿಸರ ಅಧಿಕಾರಿ ವಿವೇಕ ಮತ್ತಿತರರಿದ್ದರು.
ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಾತನಾಡಿದರು. ವಿಜಯಕುಮಾರ ಮೆಕ್ಕಳಕಿ, ಬದ್ರುದ್ದಿನ ಸೌದಾಗರ ಮತ್ತಿತರರಿದ್ದಾರೆ.