

ವಿಶ್ವವಿಖ್ಯಾತ ಮೈಸೂರು ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ ಎಂದು ಗುರುತಿಸಲಾಗಿದ್ದು, ಡ್ರೋನ್ ಕ್ಯಾಮರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.
ಅರಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋನ್ ಕ್ಯಾಮರಾ ಬಳಸಲು ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಡ್ರೋನ್ ಹಾರಾಟ ನಡೆಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.