ಬನದ ಹುಣ್ಣಿಮೆ ಜಾತ್ರೆ ಇಂದು

4
ಅನಿಷ್ಠ ಪದ್ಧತಿ ಕೈಗೊಳ್ಳದಂತೆ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಬೀದಿನಾಟಕ ಪ್ರದರ್ಶಿಸಲಾಯಿತು.
Published on

ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬನದ ಹುಣ್ಣಿಮೆ ಅಂಗವಾಗಿ ಜ.25ರಂದು ಜರುಗಲಿರುವ ಜಾತ್ರೆಗೆ ಬುಧವಾರ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಹಾಗೂ ದೇವದಾಸಿ ಪುನರ್ವಸತಿ ಯೋಜನೆ ವತಿಯಿಂದ ಯಲ್ಲಮ್ಮನಗುಡದಲ್ಲಿ ಬುಧವಾರ ಬೀದಿನಾಟಕ ಪ್ರದರ್ಶಿಸಲಾಯಿತು. ಯಾವುದೇ ಹೆಣ್ಣಿಗೆ ಮುತ್ತು ಕಟ್ಟಿ ದೇವದಾಸಿಯನ್ನಾಗಿ ಮಾಡುವುದು ಅಪರಾಧ ಎಂದು ಜಾಗೃತಿ ಮೂಡಿಸಲಾಯಿತು.

ಸವದತ್ತಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನೀತಾ ಪಾಟೀಲ, ದೇವದಾಸಿ ಪುನರ್ವಸತಿ ಯೋಜನೆ ಜಿಲ್ಲಾ ಯೋಜನಾಧಿಕಾರಿ ಸುವರ್ಣಾ ಗೌಡರ, ಭರತ ಕಲಾಚಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net