ಬಣಜಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Published on

ಹುಬ್ಬಳ್ಳಿ: ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯು ಪರೀಕ್ಷೆಗಳಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಬಣಜಿಗ ಸಮಾಜದ ವಿದ್ಯಾರ್ಥಿಗಳಿಗೆ ತಾಲೂಕು ಬಣಜಿಗ ಸಮಾಜದ ವತಿಯಿಂದ ಪುರಸ್ಕಾರ ನೀಡಲಾಗುತ್ತಿದೆ.

ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಎರಡು ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಅಂಕಪಟ್ಟಿಯ ಝರಾಕ್ಸ್, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಜುಲೆ 5ರ ಒಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಪ್ರತಿಭಾ ಪುರಸ್ಕಾರ ಸಮಾರಂಭವು ಜುಲೆ 20ರಂದು ಗೋಕುಲ ರೋಡ್ ಯಾತ್ರಿ ಗಾರ್ಡನ್ ಸಭಾಮಂಟಪದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಸಮಾಜದ ತಾಲೂಕು ಅಧ್ಯಕ್ಷ ಆನಂದ ಉಪ್ಪಿನ, ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ರು, ಮಲ್ಲಿಕಾರ್ಜುನ ಶಿರಗುಪ್ಪಿ, ಸ್ವಾಮಿ ಮಹಾಜನಶೆಟ್ಟರ ಅವರನ್ನು ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net