ಇಂದು ಕೀಟ ನಿರ್ವಹಣೆ ಬಗ್ಗೆ ಕ್ಷೇತ್ರೋತ್ಸವ

banana crop
ನಾಶಪಡಿಸಿದ ಬಾಳೆಗಿಡ
Published on

ಗುಂಡ್ಲುಪೇಟೆ: ತೋಟಗಾರಿಕೆ ಇಲಾಖೆಯ ವತಿಯಿಂದ ತಾಲೂಕಿನ ವೀರನಪುರ ಗ್ರಾಮದ ಬಳಿ ಬಾಳೆ ಬೆಳೆಯಲ್ಲಿ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಬಗ್ಗೆ ಕ್ಷೇತ್ರೋತ್ಸವ ಆಯೋಜಿಸಲಾಗಿದೆ.

ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಪ್ರಚಾರ ಮತ್ತು ಸಾಹಿತ್ಯ ಯೋಜನೆಯಡಿ ಜೂ.16ರ ಸೋಮವಾರ ಗ್ರಾಮದ ವಿ.ಎಸ್.ಮಂಜುನಾಥ್ ಅವರ ತೋಟದಲ್ಲಿ ಬೆಳಗ್ಗೆ 10 ಗಂಟೆಗೆ ಬಾಳೆ ಬೆಳೆಯಲ್ಲಿ ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ಬಗ್ಗೆ ಬೆಳೆಗಾರರಿಗೆ ಸಮಗ್ರ ಮಾಹಿತಿ ನೀಡಲಾಗುವುದು. ಚಾಮರಾಜನಗರ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಪಂಪನಗೌಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಿವಪ್ರಸಾದ್, ಹಿರಿಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಶ್ರಮದಾತ ರೈತ ಉತ್ಪಾದಕ ಕಂಪನಿಯ ಎಸ್.ಎಂ.ನಾಗಾರ್ಜುನಕುಮಾರ್, ವಿಜಿಬಿ ಬಯೋಟೆಕ್‌ನ ಬಸವಣ್ಣ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ತಾಲೂಕಿನ ಬಾಳೆ ಬೆಳಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net