ಸೋನಹಳ್ಳಿಯಲ್ಲಿ ಬಾಳೆ ಬೆಳೆ ನಾಶ

kalkunda
Published on

ಕಲ್ಕುಂದ: ನಂಜನಗೂಡು ತಾಲೂಕು ಸೋನಹಳ್ಳಿ ಗ್ರಾಮದಲ್ಲಿ ಸುರಿದ ಗಾಳಿ ಮಳೆಗೆ ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ನೇಂದ್ರ ಬಾಳೆ ನಾಶವಾಗಿದೆ.
ರೈತ ಮಹದೇವಪ್ಪ ಅವರ ಮೂರು ಎಕರೆ ಜಮೀನಿನಲ್ಲಿ ನೇಂದ್ರ ಬಾಳೆ ಬೆಳೆದಿದ್ದರು. ಶುಕ್ರವಾರ ಸುರಿದ ಭಾರಿ ಗಾಳಿ ಮಳೆಗೆ ಸಂಪೂರ್ಣ ನಾಶವಾಗಿದೆ.

ಲಕ್ಷಾಂತರ ರೂ. ಖರ್ಚು ಮಾಡಿ ಬಾಳೆ ಬೆಳೆಯಲಾಗಿತ್ತು. ಕೈಗೆ ಬರುವ ಸಮಯದಲ್ಲಿ ಬೆಳೆ ಹಾಳಾಗಿದೆ. ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ನಷ್ಟ ಪರಿಹಾರ ಬಿಡುಗಡೆ ಮಾಡಿಸಬೇಕು ಎಂದು ಮಹದೇವಪ್ಪ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net