ಕಾಡಾನೆ ದಾಳಿಗೆ ಬಾಳೆ ಗಿಡಗಳು ನಾಶ

27 SARAG 2 (1)
ಸರಗೂರು ತಾಲೂಕಿನ ಹೂವಿನಕೊಳ ಗ್ರಾಮದ ಎಚ್.ಎನ್. ನಾಗೇಂದ್ರ ಅವರ ಬಾಳೆ ತೋಟಕ್ಕೆ ಕಾಡಾನೆಗಳ ಹಿಂಡು ಲಗ್ಗೆ ಇಟ್ಟು ಬಗಿಡಗಳನ್ನು ನಾಶ ಮಾಡಿವೆ.
Published on

ಸರಗೂರು: ತಾಲೂಕಿನ ಹೂವಿನಕೊಳದಲ್ಲಿ ಭಾನುವಾರ ರಾತ್ರಿ ಕಾಡಾನೆ ದಾಳಿಯಿಂದಾಗಿ ಸುಮಾರು 2 ಎಕರೆ ಬಾಳೆ ಗಿಡ ನಾಶವಾಗಿದೆ.

ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೊಳ ಗ್ರಾಮದ ರೈತ ಎಚ್.ಎನ್.ನಾಗೇಂದ್ರ ಅವರ ಬಾಳೆ ತೋಟ ನಾಶವಾಗಿದೆ. ಸುಮಾರು 2 ಎಕರೆ ಜಮೀನಿನಲ್ಲಿ 2 ಸಾವಿರ ಬಾಳೆ ಗಿಡಗಳನ್ನು ಬೆಳೆದಿದ್ದರು. ಕಾಡಾನೆಗಳ ದಾಳಿಗೆ ಸುಮಾರು 500 ಬಾಳೆ ಗಿಡಗಳು ನಾಶವಾಗಿದ್ದು, 5 ಲಕ್ಷ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಒಂದು ತಿಂಗಳ ಹಿಂದೆ ಇದೇ ಬಾಳೆ ತೊಟಕ್ಕೆ ಆನೆಗಳು ನುಗ್ಗಿ ಸ್ವಲ್ಪ ಬೆಳೆಯನ್ನು ನಾಶ ಮಾಡಿದ್ದವು. ಈಗ ಎರಡನೇ ಬಾರಿಗೆ ಮತ್ತೆ ದಾಳಿ ನಡೆಸಿವೆ. ಮುಂದೆಯೂ ಆನೆಗಳು ದಾಳಿ ಇಡುವ ಸಾಧ್ಯತೆಯಿದೆ ಎಂದು ನೋವು ತೋಡಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net