ವಿರಾಜಪೇಟೆಯಲ್ಲಿ ಬಂದ್ ಯಶಸ್ವಿ

12 vpt 2.2
ವಿರಾಜಪೇಟೆ ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಮುಚ್ಚಿರುವ ಅಂಗಡಿ ಮಳಿಗೆ ಹಾಗೂ ಸಂಚಾರ ಸ್ಥಗಿತಗೊಳಿಸಿ ಬೆಂಬಲ ನೀಡಿದ ಖಾಸಗಿ ಬಸ್ ಗಳು.
Published on

ವಿರಾಜಪೇಟೆ: ದೇಶ ಕಂಡ ಅಪ್ರತಿಮ ಸೇನಾನಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನೀಡಿದ ವ್ಯಕ್ತಿಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಕರೆ ನೀಡಿದ್ದ ಬಂದ್‌ಗೆ ವಿರಾಜಪೇಟೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದ ವಕೀಲ ವಿದ್ಯಾಧರ್ ಗಡಿಪಾರು ಮಾಡುವಂತೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿದ್ದ ಬಂದ್ ಮಳಿಗೆಗಳು, ಉಪಾಹಾರ ಗೃಹಗಳು,ಆಟೋಗಳು, ಖಾಸಗಿ ಬ್ಯಾಂಕ್ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳು ಅರ್ಧ ದಿನ ತಮ್ಮ ಕೆಲಸ ಕಾರ್ಯ ಬಂದ್ ಮಾಡುವ ಮೂಲಕ ಸಹಕಾರ ನೀಡಿದರು. ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ವಿವಿಧ ಸ್ಥಳಗಳಿಗೆ ತೆರಳಲು ಸಾಧ್ಯವಾಗದೆ ಸಂಕಷ್ಟ ಎದುರಿಸಿದರು. ಹೋಟೆಲ್‌ಗಳು ಮುಂಜಾನೆಯಿಂದಲೇ ಬಂದ್ ಆಚರಿಸಿದವು. ಪರಿಣಾಮ ಬೆಳಗಿನ ಉಪಾಹಾರ ಮತ್ತು ಟೀ,ಕಾಫಿ ಸಿಗದೆ ಗ್ರಾಹಕರು ಪರದಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net