

ಬೆಂಗಳೂರು: ಸುರಕ್ಷತೆ ಇಲ್ಲದ ಹಿನ್ನೆಲೆಯಲ್ಲಿ ನ್ಯಾಷನಲ್ ಕಾಲೇಜು ಆವರಣದಲ್ಲಿದ್ದ ಮಾರುಕಟ್ಟೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ.
ವಿಪರೀತ ಜನಜಂಗುಳಿ ಹಿನ್ನೆಲೆಯಲ್ಲಿ ಕೆಆರ್ ಮಾರುಕಟ್ಟೆಯನ್ನು ನ್ಯಾಷನಲ್ ಕಾಲೇಜು ಮೈದಾನಕ್ಕೆ ವರ್ಗಾಯಿಸಲಾಗಿತ್ತು. ಇಲ್ಲೂ ಕೂಡ ಸಾರ್ವಜನಿಕರು ಸಮಾಜಿಕ ಅಂತರ ಕಾಯ್ದುಕೊಳ್ಳದೆ ಖರೀದಿಗೆ ಮುಂದಾದರು. ಅಲ್ಲದೆ ಮಾರುಕಟ್ಟೆಯಲ್ಲಿ ಸೋಂಕು ತಡೆಯುವ ಯಾವುದೇ ಮುಂಜಾಗ್ರತೆ ಕ್ರಮ ಅನುಸರಿಸದ ಹಿನ್ನೆಲೆಯಲ್ಲಿ ಪೊಲೀಸರು ಮಾರುಕಟ್ಟೆ ಬಂದ್ ಮಾಡಿಸಿದರು.
ಲಘು ಲಾಠಿ ಪ್ರಹಾರ: ನ್ಯಾಷನಲ್ ಕಾಲೇಜು ಆವರಣದಲ್ಲಿ ತರಕಾರಿ ಹಾಗೂ ದಿನಸಿ ಖರೀದಿಸಲು ಸಾರ್ವಜನಿಕರು ಮುಂದಾದರು. ಈ ವೇಳೆ ಪೊಲೀಸರು ಸಾಮಾಜಿ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದರು. ಹೀಗಿದ್ದರೂ ಸಾರ್ವಜನಿಕರು ಅಂತರ ಕಾಯ್ದುಕೊಳ್ಳದ ಹಿನ್ನೆಲೆಯಲ್ಲಿ ಲಘು ಲಾಠಿ ಪ್ರಹಾರ ನಡೆಸಿ ಅವರನ್ನು ಚದುರಿಸಿದರು.
ಸಂಸದ ತೇಜಸ್ವಿ ಸೂರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನ್ಯಾಷನಲ್ ಕಾಲೇಜು ಆವರಣದಿಂದ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಪೊಲೀಸರಿಗೆ ಸೂಚಿಸಿದರು.