

ಗುಂಡ್ಲುಪೇಟೆ: ಬಂಡಿಪುರಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾ.10ರಂದು ಭೇಟಿ ನೀಡಲಿದ್ದು, ನೆರೆಯ ತಮಿಳುನಾಡು ಹಾಗೂ ಕೇರಳದ ಅರಣ್ಯ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬಂಡೀಪುರಕ್ಕೆ ಆಗಮಿಸುವ ಸಚಿವರು, ಸ್ವಾಗತ ಕೇಂದ್ರದಲ್ಲಿ ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿ, ನಂತರ ಮಾನವ ವನ್ಯಜೀವಿ ಸಂಘರ್ಷ ಕುರಿತಂತೆ ನೆರೆ ರಾಜ್ಯಗಳ ಸಚಿವರ ಜತೆ ಸಭೆ ನಡೆಸಲಿದ್ದಾರೆ. ಭಾನುವಾರ ಬಂಡೀಪುರದಲ್ಲಿ ವಾಸ್ತವ್ಯ ಹೂಡುವ ಸಚಿವರು, ಸೋಮವಾರ ಬೆಳಗ್ಗೆ ಮೈಸೂರಿಗೆ ತೆರಳಿ ಅಲ್ಲಿಯೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.