

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ 4ನೇ ವಾರ್ಷಿಕ ಘಟಿಕೋತ್ಸವವು ಜೂ.11ರಂದು ನಡೆಯಲಿದೆ.
ಅಂದು ಬೆಳಗ್ಗೆ 11 ಗಂಟೆಗೆ ಜ್ಞಾನಜ್ಯೊತಿ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ಪಾಟ್ನಾ, ಬಿಹಾರ ಹೈಕೋರ್ಟ್ ನ್ಯಾಯಮೂರ್ತಿ ಪಿ.ಜಿ. ಭಜಂತ್ರಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಕೆ.ಆರ್. ಜಲಜಾ ಭಾಗವಹಿಸಲಿದ್ದಾರೆ ಎಂದು ವಿವಿ ಪ್ರಕಟಣೆ ತಿಳಿಸಿದೆ.