

ಬೆಂಗಳೂರು ಬೆಂಗಳೂರು ನಗರ ವಿಶ್ವವಿದ್ಯಾಲಯವು 2023-24ನೇ ಸಾಲಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ಸೆಂಟ್ರಲ್ ಕಾಲೇಜು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ಲಭ್ಯವಿರುವ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಯುಯುಸಿಎಂಎಸ್ http://uucms.karnataka.gov.in/Login/index ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಪದವಿ ಅಂತಿಮ ಸೆಮಿಸ್ಟರ್ ಪರೀಕ್ಷೆ ಲಿತಾಂಶ ನಿರೀಕ್ಷೆ ಮಾಡುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ 500 ರೂ., ಪರಿಶಿಷ್ಟ ಜಾತಿ/ಪಂಗಡ, ತೃತೀಯ ಲಿಂಗಿಗಳಿಗೆ 250 ರೂ.ಗಳಾಗಿದೆ. ಆನ್‌ಲೈನ್ ಮೂಲಕವೇ ಶುಲ್ಕ ಪಾವತಿಸಬೇಕು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಸೆ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅ.5 ಕೊನೆಯ ದಿನವಾಗಿದೆ. ಕನಿಷ್ಠ 10 ಅಭ್ಯರ್ಥಿಗಳು ನೋಂದಣಿಯಾಗದ ಕೋರ್ಸ್‌ಗಳನ್ನು ಆರಂಭಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ. 080 22961016/22131385.