ಬೆಂಗಳೂರು ನಗರ ವಿವಿ: ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

BCU
Published on

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ 2020ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಮತ್ತು 2021ನೇ ಸಾಲಿನಲ್ಲಿ ಸ್ನಾತಕೋತ್ತರ ವ್ಯಾಸಂಗದ ಪ್ರವೇಶ ಪಡೆದು ಎಲ್ಲ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದ ತೃತೀಯ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲು ಅರ್ಜಿ ಆಹ್ವಾನಿಸಿದೆ.

ಬುಧವಾರದಿಂದಲೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಮೇ 24 ಕೊನೆಯ ದಿನವಾಗಿದೆ. ವಿವಿ ಜಾಲತಾಣ https://www.bcu.ac.in/ ದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net