

ಬೆಂಗಳೂರು ಬೆಂಗಳೂರು ನಗರ ವಿಶ್ವವಿದ್ಯಾಲಯದ 3ನೇ ವಾರ್ಷಿಕ ಘಟಿಕೋತ್ಸವವನ್ನು ಜೂ.29ರಂದು ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 11.30 ಗಂಟೆಗೆ ಆಯೋಜಿಸಲಾಗಿದೆ. ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ (ಎಐಸಿಟಿಇ) ಅಧ್ಯಕ್ಷ ಪ್ರೊ.ಟಿ.ಜಿ. ಸೀತಾರಾಮ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಪಾಗ್ಲೊಳ್ಳಲಿದ್ದಾರೆ ಎಂದು ಕುಲಸಚಿವರು ಪಾಲ್ಗೊಳ್ಳಲಿದ್ದಾರೆ.