ಹಂಪಿ ಉತ್ಸವದಲ್ಲಿ ಎಲ್ಲರ ಸಹಕಾರ ಅಗತ್ಯ

hAMPI
ಬೆಂಗಳೂರಿನಲ್ಲಿ ಶನಿವಾರ ಹಂಪಿ ಉತ್ಸವದ ನಿಮಿತ್ತ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಿದ್ಧತೆ ಸಭೆ ನಡೆಸಿದರು.
Published on

ಹೊಸಪೇಟೆ: ಹಂಪಿಯಲ್ಲಿ ನಡೆಯುವ ಉತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಸಾವಿರ ಕಲಾವಿದರು ಸೇರಿದಂತೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು ಸೂಕ್ತ ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಶನಿವಾರ ಹಂಪಿ ಉತ್ಸವದ ನಿಮಿತ್ತ ಸಿದ್ಧತೆ ಸಭೆ ನಡೆಸಿ ಮಾತನಾಡಿದರು.

ಸ್ಥಳೀಯ ಕಲಾವಿದರಿಗೂ ಆದ್ಯತೆ ನೀಡುವುದಕ್ಕಾಗಿ ಹೆಚ್ಚುವರಿಯಾಗಿ ಮತ್ತೋಂದು ವೇದಿಕೆ ಮಾಡಲಾಗುತ್ತಿದೆ. ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿವಿಧ ಕಾರ್ಯಕ್ರಮಗಳ ಪ್ರದರ್ಶನ ಹಾಗೂ ವಿಜಯನಗರ ವೈಭವ ಪ್ರದರ್ಶನವಾಗಲಿದೆ. ಮೂರು ದಿನಗಳವರೆಗೆ ನಡೆಯಲಿರುವ ಹಂಪಿ ಉತ್ಸವಕ್ಕಾಗಿ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕು. ಜಿಲ್ಲೆಯ ಜನಪ್ರತಿನಿಧಿಗಳ ಸಹಕಾರ ಹಾಗೂ ಅವರ ಸಹಭಾಗಿತ್ವದೊಂದಿಗೆ ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಉತ್ಸವ ಯಶಸ್ವಿಗೊಳಿಸಬೇಕು. ಈ ಬಾರಿ ಬಿಸಿಲಿನ ಧಗೆ ಹೆಚ್ಚಿದ್ದು, ಪ್ರವಾಸಿಗರು, ಸಾರ್ವಜನಿಕರ ಅನುಕೂಲಕ್ಕೆ ಮೂಲಸೌಕರ್ಯ ಒದಗಿಸಬೇಕು. ಜನೋತ್ಸವಕ್ಕಾಗಿ ಎಲ್ಲಾ ಸೂಕ್ತ ತಯಾರಿ ನಡೆಸಬೇಕಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಧರಣಿ ದೇವಿ ಮಾಲಗತ್ತಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ಸಿಇಒ ಮೊಹಮದ್ ಅಲಿ ಆಕ್ರಂ ಷಾ, ಎಎಸ್ಪಿ ಸಲೀಂ ಪಾಷಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net