

ಮಡಿಕೇರಿ:
ಈಗಾಗಲೇ 29ನೇ ಕೊಲ್ಕತ್ತಾ ಅಂತರ ರಾಷ್ಟಿçÃಯ ಚಲನಚಿತ್ರೋತ್ಸವದಲ್ಲಿ ಇಂಡಿಯನ್ ಕಾಂಪಿಟೀಷನ್ ವಿಭಾಗದಲ್ಲಿ ಅಧಿಕೃತವಾಗಿ ಆಯ್ಕೆಗೊಂಡು ಹೆಸರು ಮಾಡಿರುವ ಸ್ವಸ್ತಿಕ್ ಎಂರ‍್ಟೆöÊನ್ಮೆAಟ್ ನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ದೇಶನದ ಕಂದೀಲು'' ಕನ್ನಡ ಸಿನಿಮಾ 15ನೇ ಬೆಂಗಳೂರು ಅಂತರರಾಷ್ಟಿçÃಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಫೆ.29 ರಿಂದ ಮಾ. 7ರವರೆಗೆ ಬೆಂಗಳೂರಿನ ಒರಿಯಾನ್ ಮಾಲ್‌ನಲ್ಲಿ ನಡೆಯುವ ಚಲನಚಿತ್ರೋತ್ಸವದ ಕನ್ನಡ ಸ್ಪರ್ಧಾತ್ಮಕ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನಗೊಳ್ಳಲಿದೆ. ಕೊಡಗಿನ ಕನ್ನಡ ಸಿನಿಮಾದ ಮೊದಲನೇ ನಿರ್ದೇಶಕಿ ಎಂಬ ಹೆಗ್ಗಳಿಕೆ ಪಡೆದಿರುವ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿ ಬಂದಿರುವ 2ನೇ ಚಿತ್ರಕಂದೀಲು'' ಈಗಾಗಲೇ ಮಾನ್ಯತೆ ಪಡೆದಿರುವ ಎರಡು ಫೆಸ್ಟಿವಲ್‌ಗೆ ಆಯ್ಕೆಯಾಗಿದೆ. ಈ ಬಾರಿಯ ಚಿತ್ರೋತ್ಸವದಲ್ಲಿ ಕರ್ನಾಟಕದಿಂದ ಸುಮಾರು 15 ಚಿತ್ರಗಳು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ಯಶೋಧಪ್ರಕಾಶ್ ಕೊಟ್ಟುಕತ್ತಿರ ಒಬ್ಬರೇ ನಿರ್ದೇಶಕಿಯಾಗಿದ್ದಾರೆ.
ವಿಭಿನ್ನ ಕಥಾ ಹಂದರದ ಕಂದೀಲು'' ಚಿತ್ರದ ಮುಖ್ಯಪಾತ್ರದಲ್ಲಿ ಪ್ರಭಾಕರ್ ಬಿ.ಕುಂದರ, ವಿನಿತಾರಾಜೇಶ್, ಗುರುತೇಜಸ್, ಚಂದ್ರಕಾAತ್ ಕೋಟುಪಾಡಿ, ವೆಂಕಟೇಶ್‌ಪ್ರಸಾದ್, ಹರೀಣಿವಿಜಯ್, ರಮೇಶ್‌ಕೂಡ್ಲು, ಬಸವರಾಜ್, ಆಡುಗುಡಿಶ್ರೀನಿವಾಸ್, ಮಂಜುನಾಥ್, ಶಿವಕುಮಾರ್, ಹನುಮಂತ, ಜಿ.ಸಿ.ಪರಮೇಶ್ ಗೂಗರದೊಡ್ಡಿ ಮತ್ತಿತರರು ಅಭಿನಯಿಸಿದ್ದಾರೆ. ಸುರೇಶ್ ಸಂಗೀತ, ಪಿ.ವಿ.ಆರ್.ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದ್ದು, ಕಥೆ, ಸಂಕಲನ, ಸಂಭಾಷಣೆ ಎನ್.ನಾಗೇಶ್, ಚಿತ್ರಕಥೆ ಸ.ಹರೀಶ್ ಹಾಗೂ ಎನ್.ನಾಗೇಶ್ ಒದಗಿಸಿದ್ದಾರೆ. ಕನಕಪುರದ ಗೂಗಾರೇದೊಡ್ಡಿ ಮತ್ತಿತರ ಊರುಗಳಲ್ಲಿಕಂದೀಲು'' ಚಿತ್ರೀಕರಣಗೊಂಡಿದೆ. ಬಡ ರೈತ ಕುಟುಂಬದಲ್ಲಿ ಆಘಾತ ಉಂಟಾದಾಗ ಆ ಸಂಕಷ್ಟದ ದಿನಗಳನ್ನು ಚಿತ್ರದಲ್ಲಿ ಮನೋಜ್ಞವಾಗಿ ಚಿತ್ರೀಕರಿಸಲಾಗಿದೆ.