ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಜಾಲವೃತ

SRP_14-03jpj
ಶ್ರೀರಂಗಪಟ್ಟಣದ ಅಗ್ನಿಶಾಮಕ ಠಾಣೆ ಸಮೀಪದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರಿನಿಂದ ವಾಹನ ಸವಾರರು ಹೈರಾಣಾಗಿರುವುದು.
Published on

ಶ್ರೀರಂಗಪಟ್ಟಣ: ಸೋಮವಾರ ರಾತ್ರಿ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಕೆಲಕಾಲ ಜಲಾವೃತಗೊಂಡ ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.

ಪಟ್ಟಣದ ಅಗ್ನಿಶಾಮಕ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಡಿವೈಡರ್‌ಗಳಲ್ಲಿ ಹೆಚ್ಚು ಮಣ್ಣು ತುಂಬಿಕೊಂಡಿದ್ದರೆ ಜತೆಗೆ ತ್ಯಾಜ್ಯ ಕಟ್ಟಿಕೊಂಡು ಒಳಚರಂಡಿಗಳಿಗೆ ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಮಳೆ ನೀರು ನಿಂತಿತ್ತು. ಇದರಿಂದಾಗಿ ಮುಂಜಾನೆ ಹೆದ್ದಾರಿಯಲ್ಲಿ ಓಡಾಡುವ ವಾಹನಗಳು ಅದರಲ್ಲೂ ದ್ವಿಚಕ್ರ ವಾಹನ ಸವಾರರ ಸಂಚಾರಕ್ಕೆ ಸಾಕಷ್ಟು ಅಡಚಣೆ ಉಂಟಾಗಿತ್ತು.

ವಿಷಯ ತಿಳಿಯುತ್ತಲೇ ಸ್ಥಳೀಯ ಆಡಳಿತ ಜೆಸಿಬಿಗಳ ಮೂಲಕ ಕಸ ಮತ್ತು ಹೆಚ್ಚುವರಿ ಮಣ್ಣನ್ನು ತೆಗೆದು ಟ್ರಾೃಕ್ಟರ್‌ಗಳ ಮೂಲಕ ಬೇರೆಡೆಗೆ ರವಾನಿಸಿದ ಬಳಿಕ ಸಂಚಾರಕ್ಕೆ ಮುಕ್ತವಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net