ಬೆಂಗಳೂರು ಉತ್ತರ ವಿವಿ ಆಡಳಿತ ದುರುಪಯೋಗ ಆರೋಪ: ತನಿಖೆಗೆ ರಾಜ್ಯಪಾಲರ ಆದೇಶ

Governer
Published on

ಬೆಂಗಳೂರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಹಣಕಾಸು ದುರುಪಯೋಗ, ಕೃಪಾನಿಧಿ ಕಾಲೇಜಿಗೆ ಪಠ್ಯಕ್ರಮ ಹೊರತಾದ ಪರೀಕ್ಷೆ ನಡೆಸಲು ಸಹಕಾರ ಸೇರಿ ಕೇಳಿ ಬಂದಿರುವ ಹಲವು ಆರೋಪಗಳು ಕುರಿತು ತನಿಖೆ ನಡೆಸಲು ಹೈಕೋರ್ಟ್ ನ್ಯಾಯಮೂರ್ತಿ ಅಶೋಕ್ ಬಿ. ಹಿಂಚಿಕೇರಿ ನೇತೃತ್ವದ ಸಮಿತಿ ರಚಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಸಮಿತಿ ರಚನೆ ಮಾಡಿದ್ದು, ಮೂರು ಂಗಳೊಳಗೆ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ವಿಶ್ವವಿದ್ಯಾಲಯದಿಂದ ಸಂಯೋಜನೆಗೊಂಡಿರುವ ಕೃಪಾನಿಧಿ ಕಾಲೇಜಿನ ವಿಚಾರದಲ್ಲಿ ವಿಶ್ವವಿದ್ಯಾಲಯವು ಹೆಚ್ಚಿನ ಒಲುವು ತೋರಿದೆ. ಹಾಗೆಯೇ ವಿವಿಯಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಹಣಕಾಸು ದುರುಪಯೋಗ ನಡೆದಿದೆ ಎಂಬುದೂ ಸೇರಿ ಹಲವಾರು ವಿಚಾರಗಳ ಕುರಿತು ಸಚಿವಾಲಯದಲ್ಲಿ ದೂರುಗಳು ದಾಖಲಾಗಿವೆ. ಈ ವಿಚಾರವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ವಾಸ್ತವಾಂಶವನ್ನು ತಿಳಿದು ವರದಿ ನೀಡುವಂತೆ ಆದೇಶ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net