ಬೆಂ.ವಿವಿ. ಪದವಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Bangalore University
Published on

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು 2025-26ನೇ ಸಾಲಿನ ಸ್ನಾತಕ ಪದವಿ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

ಬಿಸಿಎ (ಮಷಿನ್ ಲರ್ನಿಂಗ್, ಡೇಟಾ ಸೈನ್ಸ್, ಫುಲ್ ಸ್ಟಾಕ್ ಡೆವಲಪ್‌ಮೆಂಟ್), ಬಿ.ಕಾಂ, ಬಿಎ ಮತ್ತು ಬಿಎಸ್‌ಸಿ ಕೋರ್ಸ್‌ಗಳಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಯೋಜಕರು, ಸ್ನಾತಕ ಪದವಿ ಕೋರ್ಸ್, ರೂಸಾ ಕಟ್ಟಡ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ-560 056 ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ವಿವಿ ವೆಬ್‌ಸೈಟ್ ಭೇಟಿ  http://bangaloreuniversity.karnataka.gov.in

ನೀಡಬಹುದು. ಅರ್ಜಿಸಲ್ಲಿಸಲು ಮೇ 15 ಕೊನೆಯ ದಿನವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net