

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 60ನೇ ವಾರ್ಷಿಕ ಘಟಿಕೋತ್ಸವವು ಅಕ್ಟೋಬರ್ 8ರಂದು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣ ನಡೆಯಲಿದೆ.
ಅಂದು ಬೆಳಗ್ಗೆ 11.30 ಗಂಟೆಗೆ ನಡೆಯಲಿರುವ ಸಮಾರಂಭದ ಮುಖ್ಯ ಅತಿಥಿಗಳಾಗಿ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಪ್ರಯೋಗಾಲಯದ (ಡಿಆರ್‌ಡಿಒ) ನಿವೃತ್ತ ನಿರ್ದೇಶಕ ಡಾ. ಪ್ರಹ್ಲಾದ ರಾಮರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಕುಲಪತಿ ಡಾ. ಎಸ್.ಎಂ. ಜಯಕರ್, ಕುಲಸಚಿವೆ ಕೆ.ಟಿ. ಶಾಂತಲಾ, ಮೌಲ್ಯಮಾಪನ ಕುಲಸಚಿವ ಡಾ. ಸಿ.ಎಸ್. ಕರಿಗಾರ್ ಭಾಗವಹಿಸಲಿದ್ದಾರೆ.