ಬೆಂಗಳೂರಿನ ಯಕ್ಷಕಲಾ ಅಕಾಡೆಮಿಗೆ 'ಶ್ರೀ ವಿಶ್ವೇಶ ತೀರ್ಥ' ಪ್ರಶಸ್ತಿ

Yakshagana
Published on

ನ.23ರಂದು ಉಡುಪಿಯಲ್ಲಿ ಪ್ರದಾನ

ವಿಜಯವಾಣಿ ಸುದ್ದಿಜಾಲ ಉಡುಪಿ

ಯಕ್ಷಗಾನ ಕಲಿಕೆ, ಪ್ರದರ್ಶನ, ಪ್ರಸಾರಕ್ಕೆ ಸಂಬಂಧಿಸಿ ವಿಶಿಷ್ಟ ರೀತಿಯಲ್ಲಿ ಕಲಾಸೇವೆ ನಡೆಸುತ್ತಿರುವ ಬೆಂಗಳೂರಿನ ಯಕ್ಷ ಕಲಾ ಅಕಾಡೆಮಿ (ರಿ.) ಸಂಸ್ಥೆಯು ಯಕ್ಷಗಾನ ಕಲಾರಂಗ ಉಡುಪಿ ಕೊಡಮಾಡುವ ಪ್ರತಿಷ್ಠಿತ ಶ್ರೀ ವಿಶ್ವೇಶ ತೀರ್ಥ ಪ್ರಶಸ್ತಿ-2025ಕ್ಕೆ ಆಯ್ಕೆಗೊಂಡಿದೆ.

Yakshagana 1
ಕಲಾವಿದ ಕೆ.ಕೃಷ್ಣಮೂರ್ತಿ ತುಂಗ ಅವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಈ ಸಂಸ್ಥೆಯು ಯಕ್ಷಗಾನ ಕಲೆಯ ರಕ್ಷಣೆ ಹಾಗೂ ಅಭಿವೃದ್ಧಿಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 1 ಲಕ್ಷ ರೂ. ನಗದು ಮತ್ತು ಪ್ರಶಸ್ತಿ ಪರಿಕರ ಒಳಗೊಂಡಿದೆ. ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನ.23ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್​, ಕಾರ್ಯದರ್ಶಿ ಮುರಲಿ ಕಡೆಕಾರ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net