

ತೀರ್ಥಹಳ್ಳಿ: ತಾಲೂಕು ಆರ್ಯ ಈಡಿಗರ ಸಂಘದಿAದ ಪಟ್ಟಣದ ಕೋಳಿಕಾಲು ಗುಡ್ಡದಲ್ಲಿ ನಿರ್ಮಿಸಿರುವ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟನೆ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ ಸೆ.17ರಂದು ಮಧ್ಯಾಹ್ನ ೩ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಮಟ್ಟಿನಮನೆ ರಾಮಚಂದ್ರ ಹೇಳಿದರು.
ಗರ್ತಿಕೆರೆ ಬ್ರಹ್ಮಶ್ರೀ ನಾರಾಯಣಗುರು ಮಠದ ಶ್ರೀರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಶಾಸಕ ಆರಗ ಜ್ಞಾನೇಂದ್ರ, ಸಿಗಂದೂರು ಡಾ. ಎಸ್.ರಾಮಪ್ಪ ಪಾಲ್ಗೊಳ್ಳುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ೩೫ ವರ್ಷಗಳ ಹಿಂದೆ ಉದ್ಘಾಟಿಸಿದ ವಿದ್ಯಾರ್ಥಿ ನಿಲಯದಲ್ಲಿ ಹಾಲಿ 40 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 69.70 ಲಕ್ಷ ರೂ. ರಾಜ್ಯ ಸರ್ಕಾರದ ಅನುದಾನ ಸೇರಿ ಸಂಸದರು, ಶಾಸಕರು, ದಾನಿಗಳ ನೆರವಿನಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಆರ್ಯ ಈಡಿಗರ ವಿದ್ಯಾರ್ಥಿನಿಲಯ ನೂತನ ಕಟ್ಟಡ ನಿರ್ಮಿಸಲಾಗಿದೆ. ಈ ಕಟ್ಟಡದಲ್ಲಿ 15 ಕೊಠಡಿಗಳಿದ್ದು 60 ಮಕ್ಕಳು ತಂಗಿರಲು ಅವಕಾಶವಿದೆ ಎಂದರು.
ಆರ್ಯ ಈಡಿಗ ಸಮುದಾಯದ ವಿದ್ಯಾರ್ಥಿಗಳಿಗೆ ಕನಿಷ್ಠ ದರದಲ್ಲಿ ಹಾಸ್ಟೆಲ್ ಸೌಲಭ್ಯ ನೀಡಲಾಗುತ್ತಿದೆ. ಶಿವಮೊಗ್ಗ ಮಾತ್ರವಲ್ಲದೆ ಹೊರ ಜಿಲ್ಲೆಗಳ ಮಕ್ಕಳೂ ಇಲ್ಲಿದ್ದಾರೆ. ಹಾಸ್ಟೆಲ್ ಸೌಲಭ್ಯ ಬಳಸಿಕೊಂಡು ವ್ಯಾಸಂಗ ಮಾಡಿದ ಅನೇಕರು ಇಂದು ದೊಡ್ಡ ಹುದ್ದೆಯಲ್ಲಿದ್ದಾರೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ಮುಡುಬ ರಾಘವೇಂದ್ರ, ಕಾರ್ಯದರ್ಶಿ ಸಿ.ಜಿ.ವೆಂಕಟೇಶ್, ಸಹ ಕಾರ್ಯದರ್ಶಿ ನಾಗರಾಜ ಕುರುವಳ್ಳಿ, ಡಿ. ಲಕ್ಷ÷್ಮಣ್ ಇತರರಿದ್ದರು.