ಬಳೆ, ಅರಿಶಿನ, ಕುಂಕುಮ ವಿತರಣೆ

8blrp1
ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಶ್ರೀಚನ್ನಕೇಶವಸ್ವಾಮಿ ದೇಗುಲದ ಅಮ್ಮನವರ ದೇಗುಲದಲ್ಲಿ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ವಿತರಿಸಲಾಯಿತು. ಯೋಗೇಶ್, ಶ್ರೀನಿವಾಸ ಭಟ್ಟರ್ ಇತರರು ಇದ್ದರು.
Published on

ಬೇಲೂರು : ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ಶುಕ್ರವಾರ ಚನ್ನಕೇಶವಸ್ವಾಮಿ ದೇಗುಲದಲ್ಲಿ ಶ್ರೀ ಚನ್ನಕೇಶವಸ್ವಾಮಿ ಹಾಗೂ ಸೌಮ್ಯನಾಯಕಿ ಅಮ್ಮನವರಿಗೆ(ಮಹಾಲಕ್ಷ್ಮೀ)ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಗೆ ಪಂಚಾಮೃತ ಅಭಿಷೇಕ, ಅರ್ಚನೆ ಮೂಲಕ ವಿಶೇಷ ಪೂಜೆ ಸಲ್ಲಿಸಿ, ದೇಗುಲಕ್ಕೆ ಆಗಮಿಸಿದ ಮಹಿಳೆಯರಿಗೆ ದೇಗುಲ ಅರಿಶಿಣ-ಕುಂಕುಮ ಬಳೆ, ಹೂವು ನೀಡಲಾಯಿತು.

ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ರಾಜ್ಯದ ಪ್ರತಿಯೊಂದು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇಗುಲಗಳಲ್ಲಿ ವರಮಹಾಲಕ್ಷ್ಮೀ ಹಬ್ಬದಂದು ಮಹಿಳೆಯರಿಗೆ ಅರಿಶಿಣ ಕುಂಕುಮ, ಬಳೆ ಹಾಗೂ ಪ್ರಸಾದ ವಿತರಿಸಬೇಕೆಂಬ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇಗುಲದಲ್ಲಿ ಅಮ್ಮನವರ ದೇಗುಲದಲ್ಲಿ ಅರ್ಚಕ ಶ್ರೀನಿವಾಸ ಭಟ್ಟರ್ ವಿಶೇಷ ಪೂಜೆ ನೆರವೇರಿಸಿದ ನಂತರ ದೇಗುಲ ಇಒ ಯೋಗೇಶ್ ಮತ್ತಿತರರು ದೇವರ ದರ್ಶನಕ್ಕೆ ಆಗಮಿಸಿದ್ದ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆಗಳನ್ನು ವಿತರಿಸಿದರು.

ಶ್ರೀ ಚನ್ನಕೇಶವಸ್ವಾಮಿ ದೇಗುಲ ಇಒ ಯೋಗೇಶ್ ಮಾತನಾಡಿ, ಐದು ವರ್ಷದಿಂದ ಸರ್ಕಾರ ಹಿಂದು ಸಂಪ್ರದಾಯದಂತೆ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇಗುಲಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಆಚರಿಸಬೇಕೆಂದು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಅಮ್ಮನವರಿಗೆ ಪೂಜೆ ಸಲ್ಲಿಸಿದ ನಂತರ ದೇಗುಲಕ್ಕೆ ಆಗಮಿಸಿದ ಮಹಿಳೆಯರಿಗೆ ಅರಿಶಿನ ಕುಂಕುಮ, ಬಳೆ ವಿತರಿಸಲಾಗುತ್ತಿದೆ. ಜತೆಗೆ ಈ ಆಚರಣೆ ಯಾವುದೇ ಜಾತಿ, ಧರ್ಮ, ವರ್ಗ ಭೇದವಿಲ್ಲದೆ ಆಚರಿಸಲಾಗುತ್ತಿದೆ. ದೇಗುಲದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟರ್ ನೇತೃತ್ವದಲ್ಲಿ ಧಾರ್ಮಿಕ ಕೈಂಕರ್ಯಗಳು ನಡೆದವು.

ದೇಗುಲದ ಅರ್ಚಕ ಸುಧೀಂದ್ರ ಸೇರಿದಂತೆ ಭಕ್ತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net