ನಾಳೆ ಬೆಂಗಳೂರು ಚಲೋ

Published on

ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.7ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ಪಿ.ಮಂಜು, ಪ್ರಧಾನ ಕಾರ್ಯದರ್ಶಿ ಗೆಜ್ಜಲಗೆರೆ ಜಿ.ಆರ್.ರಾಮು ತಿಳಿಸಿದ್ದಾರೆ.


ಕನಿಷ್ಠ ವೇತನ 31 ಸಾವಿರ ರೂ.ನಿಗದಿ ಮಾಡುವುದು, 6 ಸಾವಿರ ರೂ.ಪಿಂಚಣಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು. ಗ್ರೇಡ್-2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ಹುದ್ದೆಗಳಿಗೆ ಸೇವೆಯೊಳಗಿನ ನೇರ ನೇಮಕಾತಿಗೆ ವಯೋಮಿತಿಯನ್ನು ಕೈ ಬಿಡಲು ಮನವಿ ಮಾಡಲಾಗುವುದು. ಬೆಂಗಳೂರು ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net