

ಚನ್ನಪಟ್ಟಣ : ನಗರದ ಅಭ್ಯುದಯ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಬಿ.ವಿ.ಗೀತಾಂಜಲಿ ಅಭಿಲಾಷ್ ಮತ್ತು ಉಪಾಧ್ಯಕ್ಷರಾಗಿ ಎಚ್.ಬಿ.ರೂಪಾ ಸುಬ್ಬೇಗೌಡ ಅವರು 1 ಮತಗಳ ಅಂತರದಲ್ಲಿ ಜಯಗಳಿಸಿದರು.
ಬ್ಯಾಂಕ್‌ನ 2025-30ನೇ ಸಾಲಿನ ಆಡಳಿತ ಮಂಡಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ನಿಗದಿಯಾಗಿದ್ದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ವಿ.ಗೀತಾಂಜಲಿ ಮತ್ತು ಜಯಮಾಲಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರೂಪಾ ಸುಬ್ಬೇಗೌಡ ಮತ್ತು ಕೋಕಿಲಾರಾಣಿ ಉಮೇದುವಾರಿಕೆ ಸಲ್ಲಿಸಿದ್ದರು.
15 ಸದಸ್ಯ ಬಲದ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ವಿ. ಗೀತಾಂಜಲಿ ಅಭಿಲಾಷ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಎಚ್.ಬಿ.ರೂಪಾ ಸುಬ್ಬೇಗೌಡ ತಲಾ 8 ಮತಗಳನ್ನು ಪಡೆದು ಜಯಗಳಿಸಿದರು. ಪ್ರತಿಸ್ಪರ್ಧಿಗಳಾದ ಜಯಮಾಲಾ ಮತ್ತು ಕೋಕಿಲಾಣಿ ತಲಾ 7 ಮತ ಪಡೆದು ಪರಾಜಿತರಾದರು.
ಚುನಾವಣಾಧಿಕಾರಿಗಳಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಕೆ.ಟಿ.ಉಮೇಶ್ ಕಾರ್ಯನಿರ್ವಹಿಸಿದ್ದರು.
ಬ್ಯಾಂಕ್‌ನ ಅಭಿವೃದ್ಧಿಗೆ ಶ್ರಮಿಸುವೆ: ಬ್ಯಾಂಕ್‌ನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ಪಡೆದು ಹಿರಿಯರ ಮಾರ್ಗದರ್ಶನದಲ್ಲಿ ತಾಲೂಕಿನ ಮಹಿಳೆಯರು ಆರ್ಥಿಕವಾಗಿ ಮತ್ತಷ್ಟು ಸ್ವಾವಲಂಬಿಗಳಾಗುವ ನಿಟ್ಟಿನಲ್ಲಿ ಬ್ಯಾಂಕ್‌ನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ನೂತನ ಅಧ್ಯಕ್ಷೆ ಗೀತಾಂಜಲಿ ಅಭಿಲಾಷ್ ಎಂದರು.