

ಮಂಡ್ಯ: ಬ್ಯಾಂಕ್ ಆಫ್ ಬರೋಡಾ 118ನೇ ಸಂಸ್ಥಾಪನೆ ದಿನದಂದು ನಗರದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 56 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
ಬ್ಯಾಂಕ್ ಕಚೇರಿಯಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಸಿಬ್ಬಂದಿ ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಮಾದರಿಯಾದರು. ಅಂತೆಯೇ ಸಂಗ್ರಹಿಸಿದ ರಕ್ತವನ್ನು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರ ಮಾಡಲಾಯಿತು.
ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ವ್ಯವಸ್ಥಾಪಕ ಡಾ.ನವೀನ್‌ಕುಮಾರ್ ಮಾತನಾಡಿ, ಬ್ಯಾಂಕ್‌ನ ಸಂಸ್ಥಾಪನ ದಿನದ ಅಂಗವಾಗಿ ಹಲವು ಸಾಮಾಜಿಕ ಚಟುವಟಿಕೆ ನಡೆಯುತ್ತಿದೆ. ಅದೇ ರೀತಿ ಆಯೋಜಿಸಿದ್ದ ಶಿಬಿರದಲ್ಲಿ ಬ್ಯಾಂಕ್‌ನ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ. ಈ ಮೂಲಕ ಮತ್ತೊಬ್ಬರ ಪ್ರಾಣ ಉಳಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದರು.
ಉಪ ಪ್ರಾದೇಶಿಕ ವ್ಯವಸ್ಥಾಪಕ ಸುಹಾಸ್ ಮಾತನಾಡಿ, ರಕ್ತ ದಾನ ಮಾಡಿದರೆ ಅಪಾಯದಲ್ಲಿರುವ ಜೀವವನ್ನು ಉಳಿಸಿದಂತಾಗುತ್ತದೆ. ಈ ಮೂಲಕ ರಕ್ತದಾನಿ ಮತ್ತೊಬ್ಬರಿಗೆ ಪುನರ್ಜನ್ಮ ನೀಡುತ್ತಾರೆ. ಎಲ್ಲ ದಾನಕ್ಕಿಂತ ರಕ್ತದಾನ ಶ್ರೇಷ್ಟ. ಮಾತ್ರವಲ್ಲದೆ ರಕ್ತದಾನದ ಮೂಲಕ ಭಾವೈಕ್ಯತೆ ಮನೋಭಾವ ಬೆಳೆಸೋಣ ಎಂದರು.
ಮಿಮ್ಸ್ ರಕ್ತನಿಧಿ ಕೇಂದ್ರದ ಡಾ.ಗಾಯತ್ರಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಅರುಣ್‌ಕುಮಾರ್, ವಿಬ್‌ಸೆಟಿ ನಿರ್ದೇಶಕ ಪ್ರಸನ್ನ ಕುಮಾರ್, ಪ್ರಾದೇಶಿಕ ಕಚೇರಿಯ ಜೋವಿತಾ, ಭವ್ಯಾ, ಅರುಣಕುಮಾರಿ ಇತರರಿದ್ದರು.