ಬ್ಯಾಂಕ್​ ನಿವೃತ್ತರಿಂದ ಪ್ರತಿಭಟನೆ 11ರಂದು

Published on

ಹುಬ್ಬಳ್ಳಿ: ನಿವೃತ್ತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ನಿವೃತ್ತರ ಮಹಾಕೂಟ ಜಿಲ್ಲಾ ಘಟಕದ ವತಿಯಿಂದ ಜ. 11ರಂದು ನಗರದ ಪ್ರಧಾನ ಅಂಚೆ ಕಚೇರಿ ಬಳಿಯ ಡಾ. ಅಂಬೇಡ್ಕರ್ ಮೂರ್ತಿ ಆವರಣದಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ಆಯೋಜಿಸಲಾಗಿದೆ.

ಹುಬ್ಬಳ್ಳಿ ಧಾರವಾಡ ಮತ್ತು ರಾಜ್ಯ ಘಟಕದ ದಲಿತ ಸಂಘಗಳು, ಪರಿಶಿಷ್ಟ ಜಾತಿ, ಪಂಗಡಗಳು, ಇತರ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಭಾಗವಹಿಸಿ ಧರಣಿಗೆ ಬೆಂಬಲ ಸೂಚಿಸಲಿದ್ದಾರೆ.

ಬ್ಯಾಂಕ್ ನಿವೃತ್ತರ ವೇತನ ವರ್ತಮಾನ ನೌಕರರ ವೇತನಕ್ಕೆ ಅನುಗುಣವಾಗಿ ಪರಿಷ್ಕರಣೆ ಮಾಡಬೇಕು. ಉಚಿತ ಆರೋಗ್ಯ ವಿಮೆ ಮತ್ತು ಸವಲತ್ತುಗಳನ್ನು ವಿಸ್ತರಿಸುವದು ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಚನ್ನಪ್ಪ ಝಳಕಿ, ಕಾರ್ಯದರ್ಶಿ ಮಲ್ಲಿಕಾರ್ಜುನ ಮಾಡಿನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net