ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದವನ ಬಂಧನ

Published on

ಹುಬ್ಬಳ್ಳಿ: ಇಲ್ಲಿಯ ಅಮರಗೋಳ ಎಪಿಎಂಸಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಧರಿಸಿ ಹಣ ದೋಚಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಗೋಪನಕೊಪ್ಪದ ಮಂಜುನಾಥ ಹಬೀಬ್ ಎಂದು ಗುರುತಿಸಲಾಗಿದೆ.

ಈತ ಬ್ಯಾಂಕಿನ ಹಣ ಸುಲಿಗೆ ಮಾಡುವ ಉದ್ದೇಶದಿಂದ ಮಾಸ್ಕ್ ಹಾಕಿಕೊಂಡು ಚಾಕು ಹಿಡಿದುಕೊಂಡು ನೌಕರರೊಬ್ಬರಿಗೆ ಪ್ರಾಣ ಬೆದರಿಕೆ ಒಡ್ಡಿ ಕ್ಯಾಶ್ ಕೌಂಟರ್ ಹತ್ತಿರ ಬಂದಿದ್ದ. ನೌಕರನ ರಕ್ಷಣೆಗೆ ಬಂದವರನ್ನು ತಳ್ಳಿ ಪಲಾಯನ ಮಾಡಿದ್ದ.

ವಿಷಯ ತಿಳಿದ ಎಪಿಎಂಸಿ ನವನಗರ ಠಾಣೆ ಪೊಲೀಸರು ಇನ್ಸಪೆಕ್ಟರ್ ಸಮಿವುಲ್ಲಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಐದು ತಾಸಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net