ಯಾದಗಿರಿ : ಜನವರಿ 03, (ಕ.ವಾ) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‌ಬಿಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ ಎಂದು ಕರಾಮುವಿ ಕುಲಸಚಿವÀ ಪ್ರೊ. ಕೆ.ಬಿ.ಪ್ರವೀಣ ಅವರು ತಿಳಿಸಿದ್ದಾರೆ.
ಆಸಕ್ತರು 2025ರ ಜನವರಿ 8 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯ ಒಳಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂ.ಸಂ.08212515944ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ