

ಉಡುಪಿ: ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ಬೀಡಿನಗುಡ್ಡೆ ಲಕ್ಷ್ಮೀ ಟ್ರೇಡ್ ಸೆಂಟರ್‌ನ ಲಕ್ಷ್ಮೀ ಸಭಾಭವನದಲ್ಲಿ ನಡೆಯಿತು.
ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ್ ಕುಮಾರ್ ಎಸ್. ಆರ್. ಅವರಿಗೆ ಜಾನಪದ ವಿದ್ವಾಂಸ ಮತ್ತು ಹಿರ್ಗಾನ ಮೂಜೂರಿನ ಹಾಡಿ ಶ್ರೀಬ್ರಹ್ಮಬೈದರ್ಕಳ ಗರೋಡಿಯ ಬೈದರ್ಕಳ ಪಾತ್ರಿ ಲೋಕು ಪೂಜಾರಿ ಅವರಿಗೆ ಜಾನಪದ ಕಲಾವಿದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ಜಗದೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಮಂಗಳೂರು ಕುಲಾಲ ಸಂಘದ ಸಂಚಾಲಕ ವಿಶ್ವನಾಥ ಬಂಗೇರ, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ದುಗ್ಗಪ್ಪ ಕಜೆಕಾರು, ಯುವವಾಹಿನಿ ಕೇಂದ್ರ ಸಮಿತಿ ನಿಯೋಜಿತ ಅಧ್ಯಕ್ಷ ಡಾ. ರಾಜಾರಾಮ್, ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್, ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.