

ಆನೇಕಲ್: ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಬನ್ನೇರುಘಟ್ಟ ಮುಖ್ಯ ರಸ್ತೆ ಮಳೆಯಿಂದ ಕೆಸರುಗದ್ದೆಯಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಬನ್ನೇರುಘಟ್ಟ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಾರಂಭವಾಗಿ 3 ವರ್ಷ ವರ್ಷ ಕಳೆದಿದೆ. ಈಗ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಮಳೆ ಸುರಿದಾಗ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವುದು ಸಮಸ್ಯೆಯಾಗಿದೆ.
ಈ ಭಾಗದಲ್ಲಿ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ಕೊಚ್ಚಿ ಹೋಗಿ ಗುಂಡಿಯಾಗಿ ಮಾರ್ಪಟ್ಟಿದೆ. ಈ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು ಜೀವ ಕೈಯಲ್ಲಿಡಿದುಕೊಂಡಿರುತ್ತಾರೆ.
ಜಿಗಣಿಯಿಂದ ಜಂಗಲ್ ಪಾಳ್ಯದವರೆಗೆ ನಿರ್ಮಾಣವಾಗಿರುವ ರಸ್ತೆಯಲ್ಲಿ ಮಳೆ ನೀರು ಹರಿಯಲು ನಿರ್ಮಿಸಿರುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ. ಇದರಿಂದ ನೀರು ಹರಿಯದೆ ರಸ್ತೆಯಲ್ಲಿ ನಿಂತು ಗದ್ದೆಯಂತಾಗುತ್ತಿದೆ.
ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಮಳೆ ಬಂದಾಗ ಉಂಟಾಗುವ ಸಮಸ್ಯೆಯನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಿಸುತ್ತಿಲ್ಲ. ಈ ರಸ್ತೆಯಲ್ಲಿ ದಿಚಕ್ರ ವಾಹನಗಳು ಸಂಚಾರಿಸುವುದು ಅಪಾಯ. ಮನೋಹರ್, ದ್ವಿಚಕ್ರ ವಾಹನ ಸವಾರ ಮರ ಹಾಗೂ ವಿದ್ಯುತ್ ಕಂಬ ತೆರವು ಮಾಡಬೇಕಾಗಿರುವುದರಿಂದ ಬನ್ನೇರುಘಟ್ಟ ರಸ್ತೆ ಕಾಮಗಾರಿ ವಿಳಂಬವಾಗಿದೆ. ಅಧಿಕಾರಿಗಳ ಸಭೆ ಕರೆದು ಕೂಡಲೇ ರಸ್ತೆ ಕಾಮಗಾರಿ ಆರಂಭಿಸುವಂತೆ ಸೂಚಿಸುತ್ತೇನೆ. ಎಂ.ಕೃಷ್ಣಪ್ಪ, ಶಾಸಕ