ಬನ್ನಿ ಮಹಾಂಕಾಳಿ ಆರಾಧನೆ

24 Arakera Photo 01
Published on

ಅರಕೇರಾ: ನವರಾತ್ರಿ ಹಿನ್ನೆಲೆಯಲ್ಲಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಹತ್ತಿರವಿರುವ ಬನ್ನಿ ಮರವನ್ನು ಮಹಿಳೆಯರು ಪೂಜೆ ಸಲ್ಲಿಸಿದರು.

ಬನ್ನಿ ಮರಕ್ಕೆ ಉಡಿ ತುಂಬಿ, ವೀಳ್ಯದೆಲೆ, ಅಡಿಕೆ, ಕಾಯಿ-ಕರ್ಪೂರ ನೈವೇದ್ಯ ಅರ್ಪಿಸಿದರು. ಬನ್ನಿ ಗಿಡದ ಸುತ್ತ ಪ್ರದಕ್ಷಿಣೆ ಹಾಕುವ ಮೂಲಕ ಭಕ್ತಿ ಮೆರೆದರು. ಸುತ್ತಲಿನ ಹಳ್ಳಿಗಳಲ್ಲಿ ಸೋಮವಾರ ಆಯುಧ ಪೂಜೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಅಂಗಡಿಗಳಲ್ಲಿನ ಸಾಮಗ್ರಿಗಳು, ವಾಹನಗಳಿಗೆ ಪೂಜೆ ಸಲ್ಲಿಸಿದರು. ಹೂವು, ಹಣ್ಣುಗಳಿಗೆ ಭಾರಿ ಬೇಡಿಕೆ ಕಂಡು ಬಂತು. ಮಾರುಕಟ್ಟೆಯಲ್ಲಿ ಕೆಲವರಿಗೆ ಹೂ-ಹಣ್ಣುಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net