ತಿಗಳ ಸಮುದಾಯಕ್ಕೆ ಸರ್ಕಾರ ಆದ್ಯತೆ ನೀಡಲಿ

dbp
ಬನ್ನಿರಾಯಸ್ವಾಮಿ ಜಯಂತಿ
Published on

ದೊಡ್ಡಬಳ್ಳಾಪುರ: ಜಯಂತಿಗಳು ಜೀವನಕ್ಕೆ ಬೆಳಕಾಗಬೇಕು. ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಜೀವನಕ್ಕೆ ಅರ್ಥ ಬರುತ್ತದೆ ಎಂದು ತಹಸೀಲ್ದಾರ್ ವಿಭಾ ವಿದ್ಯಾ ರಾಠೋಡ್ ಹೇಳಿದರು.
ನಗರದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ತಿಗಳ ಸಮುದಾಯದ ಮೂಲ ಅಗ್ನಿ ಪುರುಷ ಬನ್ನಿರಾಯಸ್ವಾಮಿ ಜಯಂತಿಯಲ್ಲಿ ಮಾತನಾಡಿದರು.
ಸಮುದಾಯದ ಮುಖಂಡ ಮುದ್ದಪ್ಪ ಮಾತನಾಡಿ, ತಿಗಳ ಸಮುದಾಯದವರು ಶೈಕ್ಷಣಿಕವಾಗಿ, ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಸರ್ಕಾರ ಹಿಂದುಳಿದ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಹಾಗೂ ಕೋಲಾರಗಳಲ್ಲಿ ಹೆಚ್ಚಾಗಿ ಕಂಡು ಬರುವ ತಿಗಳ ಸಮುದಾಯದವರು, ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪುರಾಣದಲ್ಲಿ ನಂಬಿರುವಂತೆ ಸತ್ಯಯುಗದಲ್ಲಿ ಇದ್ದರೆಂದು ನಂಬಲಾಗಿದ್ದ ಅಗ್ನಿ ಬನ್ನಿರಾಯಸ್ವಾಮಿಯ ಜನನದ ಉದ್ದೇಶವೇ ಭೂಮಿ, ಸೀ ಹಾಗೂ ಗೋವುಗಳನ್ನು ರಕ್ಷಣೆ ಮಾಡುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net