ಅಭಿವೃದ್ಧಿಗೆ ತೆರಿಗೆ ಸಂಗ್ರಹ ಮುಖ್ಯ

Untitled design (3)
ಬನ್ನಿಗೋಳ ಗ್ರಾಮದಲ್ಲಿ ನಡೆಯುತ್ತಿರುವ ಚರಂಡಿ ಕಾಮಗಾರಿಯನ್ನು ತಾಪಂ ಇಒ ಬುಧವಾರ ಪರಿಶೀಲಿಸಿದರು. ಗ್ರಾಪಂ ಪಿಡಿಒ ಶಂಕ್ರಪ್ಪ ಮಂಕಣಿ ಹಾಗೂ ಗ್ರಾಮಸ್ಥರು ಇದ್ದರು.
Published on

ಮುದಗಲ್: ಗ್ರಾಪಂ ವ್ಯಾಪ್ತಿಯ ಹಳ್ಳಿಗಳು ಅಭಿವೃದ್ಧಿಯಾಗಲು ನಿಗದಿತ ಸಮಯದಲ್ಲಿ ಆಸ್ತಿ ತೆರಿಗೆ ಪಾವತಿಸುವ ಮೂಲಕ ಎಲ್ಲರೂ ಸಹಕಾರ ನೀಡಬೇಕಾಗಿದೆ ಎಂದು ತಾಪಂ ಇಒ ಅಮರೇಶ ಯಾದವ್ ತಿಳಿಸಿದರು.

ನಿಗದಿತ ಸಮಯದಲ್ಲಿ ತೆರಿಗೆ ಪಾವತಿಸಿ

ಬನ್ನಿಗೋಳ, ಹೂನೂರು ಗ್ರಾಪಂ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹ ಅಭಿಯಾನದಲ್ಲಿ ಬುಧವಾರ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಮುಕ್ತ ಮಾಡಲು ಚರಂಡಿ ವ್ಯವಸ್ಥೆ ಮಾಡಲಾಗುತ್ತಿದೆ. ಕುಡಿವ ನೀರು, ಸ್ವಚ್ಛತೆ ಬಗ್ಗೆ ಅಭಿವೃದ್ಧಿ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು. ಅಲ್ಲದೆ ನಿವಾಸಿಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕು ಎಂದರು. ಬನ್ನಿಗೋಳ ಗ್ರಾಪಂ ಪಿಡಿಒ ಶಂಕ್ರಪ್ಪ ಮಂಕಣಿ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net