

ಮಡಿಕೇರಿ: ಕೊಡಗು ಜಿಲ್ಲಾ ಬಂಟರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಮೇ.೧೦ ಮತ್ತು ೧೧ ರಂದು ಮಡಿಕೇರಿಯಲ್ಲಿ ಬಂಟೆರೆನ ವಾರ್ಷಿಕ ಸಮ್ಮಿಲನ-೨೦೨೫ ನಡೆಯಲಿದ್ದು, ಅಂದು ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ನಿರ್ದೇಶಕ ಕೆ.ಶರತ್ ಕುಮಾರ್ ಶೆಟ್ಟಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ(ಮ್ಯಾನ್ ಕಾಂಪೌಂಡ್)ನಲ್ಲಿ ಬೆಳಿಗ್ಗೆ ೯ ಗಂಟೆಗೆ ಸಭಾ ಕಾರ್ಯಕ್ರಮದ ಹಾಗೂ ವಿವಿಧ ಕ್ರೀಡಾಕೂಟಗಳಿಗೆ ಚಾಲನೆ ದೊರೆಯಲಿದೆ. ಕಾರ್ಯಕ್ರಮದ ಅಂಗವಾಗಿ ಪುರುಷರಿಗೆ ೪ ಓವರ್‌ನ ಕ್ರಿಕೆಟ್ ಪಂದ್ಯಾಟ ನಡೆಯಲಿದೆ. ಅಲ್ಲದೇ, ವಾಲಿಬಾಲ್, ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ. ಕ್ರಿಕೆಟ್ ಮತ್ತು ವಾಲಿಬಾಲ್ ತಂಡಗಳು ಏ.೨೦ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.
ಮಹಿಳೆಯರಿಗೆ ಥ್ರೋಬಾಲ್, ಹಗ್ಗಜಗ್ಗಾಟ, ನಿಂಬೆ ಚಮಚ ಹಾಗೂ ಇತರೆ ಆಕರ್ಷಕ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಮಕ್ಕಳಿಗೆ ೧೦೦ ಮೀ ಓಟ ಹಾಗೂ ಮನೋರಂಜನಾ ಸ್ಪರ್ಧೆ ನಡೆಯಲಿದೆ. ಇದೇ ಸಂದರ್ಭ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಕೊಡಗಿನ ಎಲ್ಲಾ ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿಮಾಡಿದ ಅವರು, ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಾವಣೆಗಾಗಿ ನಿಖಿಲ್ ಆಳ್ವ ೯೯೭೨೪೭೭೯೮೨, ಸುಜಿತ್ ಶೆಟ್ಟಿ ೯೬೬೩೭೨೧೭೦೭ ಸಂಪರ್ಕಿಸಬಹುದಾಗಿದೆ ಎಂದು ಶರತ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಕೆ.ಸದಾನಂದ ರೈ, ನಿರ್ದೇಶಕರಾದ ಬಿ.ಬಿ.ಬಾಲಕೃಷ್ಣ ರೈ, ಬಿ.ಎಸ್.ಕಿಶೋರ್ ರೈ, ಎನ್.ರವಿಕಿರಣ್ ಶೆಟ್ಟಿ ಉಪಸ್ಥಿತರಿದ್ದರು.