ಪ್ರಥಮ ಚಿಕಿತ್ಸೆ ಉಪನ್ಯಾಸ ಕಾರ್ಯಕ್ರಮ

first aid
ಬಂಟಕಲ್ಲು ಕಾಲೇಜು ಆವರಣದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
Published on

ಶಿರ್ವ : ವಿಶ್ವ ಆರೋಗ್ಯ ದಿನದ ಅಂಗವಾಗಿ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಉಡುಪಿ ರೆಡ್‌ಕ್ರಾಸ್ ಸಂಸ್ಥೆ ಜಂಟಿ ಆಶ್ರಯದಲ್ಲಿ ಬಂಟಕಲ್ಲು ಕಾಲೇಜು ಆವರಣದಲ್ಲಿ ಪ್ರಥಮ ಚಿಕಿತ್ಸೆ ಕುರಿತು ವಿಶೇಷ ಉಪನ್ಯಾಸ ಇತ್ತೀಚೆಗೆ ನಡೆಯಿತು.

ಮಂಗಳೂರು ಪ್ರಮಾಣೀಕೃತ ಪ್ರಥಮ ಚಿಕಿತ್ಸಾ ತರಬೇತುದಾರ ಅಶ್ವಿನ್ ಕುಮಾರ್ ಎಂ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪ್ರಥಮ ಚಿಕಿತ್ಸಾ ಕೌಶಲ ಮತ್ತು ಸಂದರ್ಭಕ್ಕನುಸಾರ ನೀಡುವಿಕೆ, ರಕ್ತಸ್ರಾವ, ಸುಟ್ಟ ಗಾಯಗಳು, ಶಾಖದ ಹೊಡೆತ, ವಿಷ, ಹಾವು ಕಡಿತ, ನೀರಿನಲ್ಲಿ ಮುಳುಗುವಿಕೆ, ಮೂರ್ಛೆ ಮತ್ತು ಪ್ರಜ್ಞಾಹೀನತೆ ಮುಂತಾದ ಸ್ಥಿತಿಯಲ್ಲಿ ಪ್ರಥಮ ಚಿಕಿತ್ಸೆ ನೀಡುವ ಕುರಿತು ಸಮಗ್ರ ಮಾಹಿತಿ ನೀಡಿದರು.

ಉಡುಪಿ ರೆಡ್‌ಕ್ರಾಸ್ ಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಬಸ್ರೂರು ರಾಜೀವ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರ್ ಯುವ ರೆಡ್‌ಕ್ರಾಸ್ ಸಂಸ್ಥೆ ಪ್ರಥಮ ಚಿಕಿತ್ಸೆಯಲ್ಲಿ ಮಾಡಿದ ಗಮನಾರ್ಹ ಸಾಧನೆ, ರಕ್ತದಾನ, ಅಂಗಾಂಗ ದಾನ, ನಿಧಿ ಸಂಗ್ರಹಿಸುವ ಚಟುವಟಿಕೆಗಳು, ಪ್ರವಾಹ ಪರಿಹಾರ ಅಭಿಯಾನಗಳು ಮತ್ತು ವಿಪತ್ತು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.

ಸಂಸ್ಥೆ ಪ್ರಾಂಶುಪಾಲ ಡಾ.ತಿರುಮಲೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಂಯೋಜಕ ನಾಗರಾಜ್ ರಾವ್ ಸ್ವಾಗತಿಸಿದರು. ಸಾಕ್ಷಿ ಪ್ರಾರ್ಥಿಸಿದರು. ಶ್ರಾವ್ಯ ಮತ್ತು ಮಾನ್ಯ ಅತಿಥಿಗಳನ್ನು ಪರಿಚಯಿಸಿದರು. ಮೈತ್ರಿ ಶೆಟ್ಟಿ ವಂದಿಸಿದರು. ಪ್ರಿನ್ಸಿಟಾ ಮೆನೇಜಸ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net