

ವಿಜಯವಾಣಿ ಸುದ್ದಿಜಾಲ ಬಂಟ್ವಾಳ
ಸಂಘ ಗಟ್ಟಿಯಾಗಬೇಕು. ಸಂಘಟನೆ ಜತೆ ಇದ್ದುಕೊಂಡು ಉದ್ಯಮ ಮಾಡಿದಾಗ ಸಂಘಟನೆಯೊಂದಿಗೆ ನಮಗೂ ಬಲ ಬರುತ್ತದೆ. ಸಂಘದ ಪ್ರತಿಯೊಬ್ಬ ಸದಸ್ಯರು ಸಂಘದ ಅಭಿವೃದ್ಧಿಗಾಗಿ ಸಹಕರಿಸುವಂತೆ ದ.ಕ. ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷ ಬಾಬು ಕೆ.ವಿಟ್ಲ ಹೇಳಿದರು.
ಬಿ.ಸಿ.ರೋಡಿನಲ್ಲಿ ಸೋಮವಾರ ನಡೆದ ದ.ಕ. ಜಿಲ್ಲಾ ಶಾಮಿಯಾನ ಮಾಲೀಕರ ಸಂಘದ ಬಂಟ್ವಾಳ ಘಟಕದ 8ನೇ ವಾರ್ಷಿಕ ಮಹಸಾಭೆಯಲ್ಲಿ ಮಾತನಾಡಿದರು.
ಬಂಟ್ವಾಳ ಘಟಕ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಾಮಿಯಾನ ಮಾಲೀಕರಾದ ಅಬ್ದುಲ್ ಕರೀಂ, ಸುರೇಶ್ ಪೂಜಾರಿ, ತಿಮ್ಮಪ್ಪ ಅವರನ್ನು ಗೌರವಿಸಲಾಯಿತು. ಶೈಕ್ಷಣಿಕ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಜಿಲ್ಲಾ ಕಾರ್ಯದರ್ಶಿ ಪಿಯೂಸ್ ಮ್ಯಾಕ್ಸಿಂ ಸಿಕ್ವೇರಾ, ಜಿಲ್ಲಾ ಕೋಶಾಧಿಕಾರಿ ನಿಶಿತ್ ಪೂಜಾರಿ, ತಾಲೂಕು ಘಟಕ ಉಪಾಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ಉಪಸ್ಥಿತರಿದ್ದರು. ಬಂಟ್ವಾಳ ಘಟಕದ ಕಾರ್ಯದರ್ಶಿ ಸುಧೀರ್ ಕುಮಾರ್ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಮೈಕಲ್ ಡಿಕೋಸ್ತಾ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಗೌರವಾಧ್ಯಕ್ಷ ಸುಭಾಶ್ಚಂದ್ರ ಜೈನ್ವ್ ಸ್ವಾಗತಿಸಿದರು. ಸದಸ್ಯ ಐವನ್ ಡಿಸೋಜ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು. ಮಹಾಸಭೆ ಪೂರ್ವಭಾವಿಯಾಗಿ ಲಯನ್ಸ್ ಕ್ಲಬ್ ಬಂಟ್ವಾಳ ಸಹಕಾರದಲ್ಲಿ ರಕ್ತದಾನ ಶಿಬಿರ ನಡೆಯಿತು.