ಬಂಟ್ವಾಳ-ಬೆಂಗಳೂರು ಕೆಆರ್‌ಎಸ್ ಪಾದಯಾತ್ರೆ

krs
ಸುದ್ದಿಗೋಷ್ಠಿಯಲ್ಲಿ ಎಸ್.ಕೆ.ಪ್ರಭು ಮಾತನಾಡಿದರು. ಸಮೀರ್, ದಯಾನಂದ, ತೀರ್ಥೇಶ್, ನಾಗರಾಜರಾವ್ ಶಿಂಧೆ ಉಪಸ್ಥಿತರಿದ್ದರು.
Published on

ಶಿವಮೊಗ್ಗ: ಕಳೆದ ವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪಕ್ಷದ ನಾಲ್ಕನೇ ಸಂಸ್ಥಾಪನಾ ದಿನದಂದು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅವುಗಳನ್ನು ಮುಂದಿಟ್ಟು ಕೊಂಡು ಮುಂದಿನ ದಿನಗಳಲ್ಲಿ ಪಕ್ಷದ ಚಟುವಟಿಕೆಗಳು ನಡೆಯಲಿವೆ. ಸೌಜನ್ಯಾ ಸಾವಿನ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಬಂಟ್ವಾಳದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ಕರ್ನಾಟಕ ರಾಷ್ಟ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಕೆ.ಪ್ರಭು ತಿಳಿಸಿದರು.

ನಮ್ಮ ಪಕ್ಷ ಕಾಂಗ್ರೆಸ್‌ನ ಎಲ್ಲ ಗ್ಯಾರಂಟಿಗಳನ್ನು ಸ್ವಾಗತಿಸುತ್ತದೆ. ಆದರೆ ಅದರ ಅನುಷ್ಠಾನಕ್ಕೆ ಅಗತ್ಯವಿರುವ ಹಣದ ಕ್ರೋಡೀಕರಣಕ್ಕೆ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು. ಖಾಸಗಿ ಆಸ್ಪತ್ರೆಗಳ ಮಾಫಿಯಾ ತಡೆಗಟ್ಟಬೇಕು. ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದು, ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು, ಅರಣ್ಯ ಸಂರಕ್ಷಣೆ ಮಾಡಬೇಕು ಎಂಬುದು ನಮ್ಮ ಸರ್ಕಾರದ ಪ್ರಮುಖ ಒತ್ತಾಯವಾಗಿದೆ ಎಂದರು.
ಪಾರದರ್ಶಕ ಚುನಾವಣೆಗೆ ಆದ್ಯತೆ ನೀಡಬೇಕು. ಒಕ್ಕೂಟ ವ್ಯವಸ್ಥೆ ಬಲಪಡಿಸಬೇಕು. ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸುಮಾರು 3.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ಲೋಕಾಯುಕ್ತವನ್ನು ಇನ್ನಷ್ಟು ಬಲಪಡಿಸಬೇಕು ಎಂಬುದು ನಮ್ಮ ಮುಖ್ಯ ಆಗ್ರಹವಾಗಿದೆ ಎಂದು ತಿಳಿಸಿದರು.
ಕೆಎಆರ್‌ಎಸ್ ಮುಖಂಡರಾದ ದಯಾನಂದ, ಸಮೀರ್, ನಾಗರಾಜರಾವ್ ಶಿಂಧೆ, ತೀರ್ಥೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net