

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಸೋಮವಾರ ಮಧ್ಯರಾತ್ರಿ ವೇಳೆ ಕೈಕಂಬದ ಪೊನ್ನೋಡಿ ಎಂಬಲ್ಲಿನಡೆದಿದ್ದು
ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಸೀಫ್ (29) ಕೊಲೆಗೀಡಾಗಿದ್ದಾನೆ
ಅತನ ಸ್ನೇಹಿತ ಮಹಮ್ಮದ್ ನೌಫಾಲ್ ಮತ್ತು ಮಹಮ್ಮದ್ ನೌಸಿರ್ ಮಾರಿಪಳ್ಳ ಎಂಬಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ. ಪೊನ್ನೋಡಿಯ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ 11 ಗಂಟೆಯ ವೇಳೆ ಕ್ಷುಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದ ಕೊಲೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.