

ಬಂಟ್ವಾಳ: ಮಕ್ಕಳ ಸರ್ವತೋಮುಖ ವಿಕಾಸಕ್ಕೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ. ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯಲ್ಲಿ ವಿದ್ಯಾರ್ಥಿ ಸಂಘ, ವಿಜ್ಞಾನ ಸಂಘ ಮತ್ತು ಲಲಿತ ಕಲಾ ಸಂಘಗಳ ವಾರ್ಷಿಕ ಶೈಕ್ಷಣಿಕ ಕಾರ‌್ಯ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು.
ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಹರಿಪ್ರಸಾದ್ ಮಾತನಾಡಿ, ನಾಯಕತ್ವ ಗುಣ ವಿದ್ಯಾರ್ಥಿ ಜೀವನದಿಂದಲೇ ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕ ಸತೀಶ್ ಬಂಗೇರ, ಪೂರ್ವ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕಿ ಹೇಮಲತಾ ಹಾಗೂ ಶಾಲಾ ನಾಯಕ ಅರ್ಪಣ್ ರೈ ಮತ್ತಿತರರು ಉಪಸ್ಥಿತರಿದ್ದರು
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ‌್ಯಕ್ರಮ ನಡೆಯಿತು. ವಿದ್ಯಾರ್ಥಿನಿ ಸೃಷ್ಟಿ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿ ಶಿರೋದಿತ್ ಬಿ.ಶೆಟ್ಟಿ ವಂದಿಸಿದರು. ವೀಕ್ಷಿತಾ ಎನ್ ಮತ್ತು ಎಲ್ವೀನಾ ಡಿಸೋಜ ನಿರೂಪಿಸಿದರು.