ಸಮ್ಮೇಳನದ ಸರ್ವಾಧ್ಯಕ್ಷರಿಗೆ ಆಹ್ವಾನ : ಜ.4, 5ರಂದು ಕನ್ನಡ ಸಾಹಿತ್ಯ ಉತ್ಸವ

New Project (34)
Published on

ಬಂಟ್ವಾಳ: ತಾಲೂಕಿನ ಮಂಚಿ ಕೊಳ್ನಾಡಿನಲ್ಲಿ ಜ.4 ಮತ್ತು 5ರಂದು ನಡೆಯಲಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಮುಳಿಯ ಶಂಕರ ಭಟ್ಟ ಅವರನ್ನು ಬಂಟ್ವಾಳ ಕಸಾಪ ಪದಾಧಿಕಾರಿಗಳು ಮಂಗಳವಾರ ಅವರ ಮನೆಗೆ ಸಮ್ಮೇಳನದ ಆಮಂತ್ರಣ ಪತ್ರವನ್ನು ನೀಡಿ ಅಧಿಕೃತವಾಗಿ ಆಮಂತ್ರಿಸಲಾಯಿತು.

ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಪರಿಷತ್ತಿನ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕ ರಾಮ ಪ್ರಸಾದ್ ರೈ ತಿರುವಾಜೆ, ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪಾಣೆಮಂಗಳೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಮಹಮ್ಮದ್ ಮತ್ತು ದಿನೇಶ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net