ಬಂಟರ ಸಂಘ ಕಟ್ಟಡ ನವೀಕರಣ ಮನವಿ ಪತ್ರ ಬಿಡುಗಡೆ

pathra
Published on

ಮೂಲ್ಕಿ: ಇಲ್ಲಿನ ಬಂಟರ ಸಂಘದ ಕಟ್ಟಡ ನವೀಕರಣದ ಮನವಿ ಪತ್ರದ ಬಿಡುಗಡೆ ಕಾರ್ಯಕ್ರಮ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆಯಿತು.

ಕ್ಷೇತ್ರದ ಅರ್ಚಕ ನರಸಿಂಹ ಭಟ್ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಜಾಗತಿಕ ಬಂಟರ ಸಂಘದ ಒಕ್ಕೂಟ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮನವಿ ಪತ್ರದ ಬಿಡುಗಡೆ ಮಾಡಿದರು.

ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಮೂಲ್ಕಿ ಬಂಟರ ಸಂಘ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ, ಮಾಜಿ ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಹಿರಿಯರಾದ ದೆಪ್ಪುಣಿಗುತ್ತು ಸುಧಾಕರ ಶೆಟ್ಟಿ, ಮುರಳೀಧರ ಭಂಡಾರಿ, ಗಂಗಾಧರ ಶೆಟ್ಟಿ, ಬರ್ಕೆ ತೋಟ, ಸಾಯಿನಾಥ ಶೆಟ್ಟಿ, ಮುಂಡ್ಕೂರು, ಸ್ವರಾಜ್ ಶೆಟ್ಟಿ ಕಿನ್ನಿಗೋಳಿ, ಚಿತ್ತರಂಜನ್ ಭಂಡಾರಿ, ಜೀವನ್ ಶೆಟ್ಟಿ ಕಾರ್ನಾಡ್, ಮೂಲ್ಕಿ ಬಂಟರ ಸಂಘ ಮಹಿಳಾ ಘಟಕ ಅಧ್ಯಕ್ಷೆ ರೋಹಿಣಿ ಶೆಟ್ಟಿ, ಮಾಜಿ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ, ಮಮತಾ ಶೆಟ್ಟಿ, ಭಾನುಮತಿ ಶೆಟ್ಟಿ ಕಕ್ವಗುತ್ತು, ಬಬಿತಾ ಶೆಟ್ಟಿ ಕಿನ್ನಿಗೋಳಿ, ಪುಷ್ಪರಾಜ ಚೌಟ, ಮಾಧವ ಶೆಟ್ಟಿ ಉತ್ರಂಜೆ, ರಂಗನಾಥ ಶೆಟ್ಟಿ ಉದಯಕುಮಾರ್ ಶೆಟ್ಟಿ ಆಧಿಧನ್, ಶ್ರೀಶ ಐಕಳ, ಕಿಶೋರ್ ಶೆಟ್ಟಿ ಬಪ್ಪನಾಡು, ಮಹೀಮ್ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಕಾರ್ನಾಡ್ ಬೈಪಾಸ್, ಶರತ್ ಶೆಟ್ಟಿ, ಸಂಕಲಕರಿಯ, ಚಂದ್ರಹಾಸ ಶೆಟ್ಟಿ, ದಾಮೋದರ್ ಶೆಟ್ಟಿ ಕೊಡೆತ್ತೂರು, ನಿಶಾಂತ್ ಶೆಟ್ಟಿ ಕಿಲೆಂಜೂರು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net