

ಕಾರವಾರ: ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.
ನಗರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾಣ ವಿತರಿಸಲಾಯಿತು. ಪ್ರೌಢ ಶಾಲಾ ವಿಭಾಗದಲ್ಲಿ ದಿಶಾ. ಜೆ, ದೀಕ್ಷಾ ಮಂಜುನಾಥ ನಾಯ್ಕ, ಅಲೇಖಾ ಎಂ ನಾಯ್ಕ, ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ಸೃಷ್ಟಿ ಆರ್ ಪಟಗಾರ, ನಯನಾ ಕೃಷ್ಣಾ ಗೌಡ, ಸಂಜನಾ ಭಾಸ್ಕರ ನಾಯ್ಕ, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಕಿರಣ ಧುಮಾಲಿ, ಅಂಕಿತಾ ಡಿ ದಳವಿ, ರಕ್ಷಿತಾ ಆರ್ ಗೌಡ, ವಿದ್ಯಾರ್ಥಿಗಳಿಗೆ ನಗದು
ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಬಹುಮಾಣ ವಿತರಿಸಿದರು. ಜಿಪಂ ಸಿಇಒ ಡಾ.ದಿಲೀಶ್ ಶಶಿ, ಎಸ್‌ಪಿ ದೀಪನ್ ಎಂ.ಎನ್. ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ್ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ತರಬೇತಿ ನಿರತ ಐಎಎಸ್ ಅಧಿಕಾರಿ, ಝೂಪೀಶನ್ ಹಕ್, ಜಿಲ್ಲಾ
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ನಗರಸಭೆಯ ಪೌರಾಯುಕ್ತ ಜಗದೀಶ ಹುಲಗೆಜ್ಜಿ, ಜಿಲ್ಲಾ
ವಾರ್ತಾಧಿಕಾರಿ ಬಿ.ಶಿವಕುಮಾರ್, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ ಹಾಗೂ ನಗರಸಭೆ ಸದಸ್ಯರು, ವಿವಿಧ
ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ಗಾಂಧೀ ಭಜನೆಗಳ ಕಾರ್ಯಕ್ರಮ ನಡೆಯಿತು, ನಂತರ ಎಂಜಿ ರಸ್ತೆಯಲ್ಲಿ ಶ್ರಮದಾನ ನಡೆಸಲಾಯಿತು. ಹಿರಿಯ ಆರೋಗ್ಯ ನಿರೀಕ್ಷಕರು ಯಾಕುಬ್ ಶೇಖ್ ಸ್ವಾಗತಿಸಿದರು, ನಗರಸಭೆ ವ್ಯವಸ್ಥಾಪಕ ಎನ್.ಎಂ ಮೆಸ್ತ ವಂದಿಸಿದರು.